ಸಮಾಜಕ್ಕೆ ಎಂದಿಗೂ ಆದರ್ಶಪ್ರಾಯರಾಗಿರುವ ಮಹನೀಯರ ಜಯಂತಿಗಳಲ್ಲಿ ಎಲ್ಲರೂ ಪಾಲ್ಗೊಳ್ಳಿ

ಹಡಪದ ಅಪ್ಪಣ್ಣನವರ ೮೯೨ನೇ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಪ್ರದೀಪ್ ದೇವಗಿರಿ


ಭದ್ರಾವತಿಯಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ  ೧೨ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಚನಕಾರ ಹಡಪದ ಅಪ್ಪಣ್ಣನವರ ೮೯೨ನೇ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಭದ್ರಾವತಿ: ಸಮಾಜಕ್ಕೆ ಎಂದಿಗೂ ಆದರ್ಶಪ್ರಾಯರಾಗಿರುವ ಮಹನೀಯರ ಜಯಂತಿಗಳಲ್ಲಿ ಎಲ್ಲಾ ಸಮುದಾಯದ ಜನರು ಪಾಲ್ಗೊಂಡು, ಮಹನೀಯರ ಮೌಲ್ಯಯುತ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಹಸೀಲ್ದಾರ್ ಪ್ರದೀಪ್ ದೇವಗಿರಿ ಕರೆ ನೀಡಿದರು. 
    ಅವರು ಬುಧವಾರ ತಾಲೂಕು ಆಡಳಿತ ಹಾಗೂ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ೧೨ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಚನಕಾರ ಹಡಪದ ಅಪ್ಪಣ್ಣನವರ ೮೯೨ನೇ ಜಯಂತಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು.  
    ಮಹನೀಯರ ಜಯಂತಿ ಕಾರ್ಯಕ್ರಮಗಳು ಸಾರ್ಥಕಗೊಳ್ಳಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಮಹನೀಯರ ವಿಚಾರಧಾರೆಗಳನ್ನು ಅರಿತುಕೊಳ್ಳುವ ಜೊತೆಗೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದರು. 
    ಸಮಾಜದ ವಿದ್ಯಾರ್ಥಿನಿ ವೈ. ರಕ್ಷಿತಾ ಹಡಪದ ಅಪ್ಪಣ್ಣನವರ ಜೀವನ, ಸಾಧನೆ ಕುರಿತು ವಿವರಿಸಿದರು.  ಸಮಾಜದ ಅಧ್ಯಕ್ಷ ಲಕ್ಷ್ಮೀಪತಿ, ಕಾರ್ಯದರ್ಶಿ ವಿಶ್ವನಾಥ್, ಭೂ ನ್ಯಾಯ ಮಂಡಳಿ ಸದಸ್ಯ ಎಸ್. ಪುಟ್ಟರಾಜು, ಶಿರಸ್ತೇದಾರ್ ಗಿರಿರಾಜ್, ಸಮಾಜದ ಪ್ರಮುಖರು, ತಾಲೂಕು ಕಚೇರಿ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 
    ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಎಂ. ಸಿಂಚನ, ತಾಕೇಶ್, ಕೆ.ಎಸ್ ಸಹನಾ ಹಾಗೂ ವೈ. ರಕ್ಷಿತಾ ಅವರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.