ಜು.೪ ಬೃಹತ್ ರಕ್ತದಾನ ಶಿಬಿರ
ಭದ್ರಾವತಿ : ನಗರಸಭೆ ವ್ಯಾಪ್ತಿಯ ನ್ಯೂಟೌನ್ ಸೈಂಟ್ ಚಾರ್ಲ್ಸ್ ಪದವಿ ಹಾಗೂ ಪದವಿಪೂರ್ವ ಕಾಲೇಜು ಮತ್ತು ಶಿವಮೊಗ್ಗ ಡಾ. ಬಿ.ಆರ್ ಅಂಬೇಡ್ಕರ್ ಸ್ವಯಂ ಪ್ರೇರಿತ ರಕ್ತ ಕೇಂದ್ರ ಇವುಗಳ ಸಂಯುಕ್ತಾಶ್ರಯದಲ್ಲಿ ಜು. ೪ರ ಶನಿವಾರ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಸೈಂಟ್ ಚಾರ್ಲ್ಸ್ ಕಾಲೇಜು ಆವರಣದಲ್ಲಿ ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೨ ಗಂಟೆವರೆಗೆ ಶಿಬಿರ ನಡೆಯಲಿದೆ. ವಿವಿಧ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ರಕ್ತದಾನಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: ೮೮೮೪೭೧೦೪೮೫, ೯೯೧೬೮೬೩೩೯೯ ಅಥವಾ ೮೨೭೭೨೩೦೫೩೫ ಸಂಖ್ಯೆ ಸಂಪರ್ಕಿಸಬಹುದಾಗಿದೆ.
