ಕನ್ನಡನಾಡು, ಕನ್ನಡಿಗರ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಹೊಂದಿದ್ದ ಡಾ. ಎಸ್. ಜಾನಕಿ
ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದಿಂದ ಜನ್ನಾಪುರ ಬಂಟರ ಭವನದಲ್ಲಿ ಆಯೋಜಿಸಲಾಗಿದ್ದ ನುಡಿ ಗೀತಾ ನಮನ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮ ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಉದ್ಘಾಟಿಸಿದರು.
ಭದ್ರಾವತಿ: ಖ್ಯಾತ ಗಾಯಕಿ ದಿವಂಗತ ಡಾ. ಎಸ್. ಜಾನಕಿ ಅವರು ಕನ್ನಡನಾಡು, ಕನ್ನಡಿಗರ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಹೊಂದಿದ್ದರು. ಅಲ್ಲದೆ ಈ ನಾಡಿನ ಮಣ್ಣಿನಲ್ಲಿಯೇ ಮಣ್ಣಾದರು ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಹೇಳಿದರು.
ಅವರು ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದಿಂದ ಜನ್ನಾಪುರ ಬಂಟರ ಭವನದಲ್ಲಿ ಆಯೋಜಿಸಲಾಗಿದ್ದ ನುಡಿ ಗೀತಾ ನಮನ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಡಾ. ಎಸ್. ಜಾನಕಿಯವರು ತಮ್ಮ ಸುಮಧುರವಾದ ಕಂಠದ ಮೂಲಕ ದೇಶಾದ್ಯಂತ ಮನೆಮಾತಾಗಿದ್ದರು. ವಿಶೇಷವಾಗಿ ಕನ್ನಡನಾಡು, ಕನ್ನಡಿಗರ ಬಗ್ಗೆ ಪ್ರೀತಿ, ಅಭಿಮಾನ ಹೊಂದುವ ಮೂಲಕ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಈ ನಾಡಿನ ಪ್ರತಿಯೊಬ್ಬರು ಇವರ ಸ್ಮರಣೆ ಮಾಡಬೇಕೆಂದರು.
ಉದ್ಯಮಿ ಬಿ.ಕೆ ಜಗನ್ನಾಥ್, ಡಾ. ಎಸ್. ಜಾನಕಿಯವರ ಹಲವು ವಿಷಯಗಳ ಕುರಿತು ಮಾತನಾಡಿದರು. ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಪ್ರಮುಖರಾದ ಪ್ರಭು, ಸತೀಶ್, ಕಲಾವಿದರಾದ ರಾಜವಿಕ್ರಮ್, ವಿಜಯ್ ದಯಕಾರ್, ಧನಪಾಲ್ ಸಿಂಗ್ ಇನ್ನಿತರರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. .ಚರಣ್ ಕವಡ್ ಸ್ವಾಗತಿಸಿ, ವಿಶ್ವನಾಥ್ ವಂದಿಸಿದರು.
