ಸರ್ಕಾರಿ ಶಾಲೆ ಮಕ್ಕಳಿಗೆ ಬರವಣಿಗೆ ಪುಸ್ತಕ, ಲೇಖನ ಸಾಮಗ್ರಿ ವಿತರಣೆ


ಭದ್ರಾವತಿ ನಗರಸಭೆ ವ್ಯಾಪ್ತಿಯ ನ್ಯೂಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸ್ಕಂದ ಟ್ರಸ್ಟ್ ಉಚಿತ ಬರವಣಿಗೆ ಪುಸ್ತಕ ಹಾಗು ಲೇಖನ ಸಾಮಗ್ರಿಗಳನ್ನು ಶನಿವಾರ ವಿತರಿಸಲಾಯಿತು.  
    ಭದ್ರಾವತಿ: ನಗರಸಭೆ ವ್ಯಾಪ್ತಿಯ ನ್ಯೂಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸ್ಕಂದ ಟ್ರಸ್ಟ್ ಉಚಿತ ಬರವಣಿಗೆ ಪುಸ್ತಕ ಹಾಗು ಲೇಖನ ಸಾಮಗ್ರಿಗಳನ್ನು ಶನಿವಾರ ವಿತರಿಸಲಾಯಿತು.  
    ಸಾಮಾಜಿಕ ಸೇವಾ ಮನೋಭಾವನೆಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸ್ಕಂದ ಟ್ರಸ್ಟ್ ಪ್ರಸಕ್ತ ಸಾಲಿನಲ್ಲಿ ಈಗಾಗಲೇ ಹಲವಾರು ಸರ್ಕಾರಿ ಶಾಲೆಗಳಿಗೆ ತೆರಳಿ ಉಚಿತವಾಗಿ ಬರವಣಿಗೆ ಪುಸ್ತಕ ಹಾಗು ಲೇಖನ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸರ್ಕಾರಿ ಶಾಲೆ ಮಕ್ಕಳ ಕಲಿಕೆಗೆ ನೆರವಾಗುವ ಮೂಲಕ ಮಾದರಿಯಾಗಿದೆ. 
    ಸ್ಕಂದ ಟ್ರಸ್ಟ್ ಪ್ರಮುಖರಾದ ಜಿ.ಕೆ ಮಧುಸೂದನ್, ನಾರಾಯಣ ಮತ್ತು ಶಾಲೆಯ ಶಿಕ್ಷಕ ಹಾಗು ಸಿಬ್ಬಂದಿ ವೃಂದದವರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.