ಆ.೨ರಂದು ಪ್ರಧಾನಿ ಮೋದಿಯವರೊಂದಿಗೆ ಶ್ರೀ ಸತ್ಯಸಾಯಿ ಜ್ಞಾನಪೀಠ ವಿದ್ಯಾರ್ಥಿಗಳು ಸಂವಾದ



ಭದ್ರಾವತಿ ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶ್ರೀ ಸತ್ಯಸಾಯಿ ಜ್ಞಾನಪೀಠ(ಸಿ.ಬಿ.ಎಸ್.ಇ) ಶಾಲೆ.
    ಭದ್ರಾವತಿ : ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶ್ರೀ ಸತ್ಯಸಾಯಿ ಜ್ಞಾನಪೀಠ(ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಆ.೨ರಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. 
    ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿರುವ ದೇಶದ ಆಯ್ದ  ೧೧ ಶ್ರೀ ಸತ್ಯಸಾಯಿ ಶಾಲೆಗಳ ಮಕ್ಕಳೊಂದಿಗೆ ಬೆಳಿಗ್ಗೆ ೧೦ ರಿಂದ ೧೧.೩೦ರವರೆಗೆ `ನಶ ಮುಕ್ತ ಭಾರತ' ವಿಷಯ ಕುರಿತು ನರೇಂದ್ರ ಮೋದಿಯವರು ಸಂವಾದ ನಡೆಸಲಿದ್ದಾರೆ. ಈ ಶಾಲೆಗಳ ಪೈಕಿ ನಗರದ ಶ್ರೀ ಸತ್ಯಸಾಯಿ ಜ್ಞಾನಪೀಠ ಶಾಲೆ ಸಹ ಒಂದಾಗಿದ್ದು, ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವಲಯದಲ್ಲಿ ಸಂತಸವನ್ನುಂಟು ಮಾಡಿದೆ. ಸಂವಾದಲ್ಲಿ ಸುಮಾರು ೨೦೦ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. 
    ಈ ಕುರಿತು ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ, ಪ್ರಶಾಂತಿ ಸೇವಾ ಟ್ರಸ್ಟ್ ಅಧ್ಯಕ್ಷ ಡಿ. ಪ್ರಭಾಕರ ಬೀರಯ್ಯ ಹಾಗು ಉಪಾಧ್ಯಕ್ಷ ಆರ್. ವಿನಯ್, ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಜಂಟಿ ಆಡಳಿತಾಧಿಕಾರಿ ಸೌಮ್ಯ ಪ್ರಭಾಕರ ಬೀರಯ್ಯ ಮತ್ತು ಶ್ರೀ ಸತ್ಯಸಾಯಿ ಸೇವಾ ಸಮಿತಿ ಸಂಚಾಲಕರು, ಪದಾಧಿಕಾರಿಗಳು, ಪ್ರಮುಖರಾದ ಪ್ರಾಂಶುಪಾಲರಾದ ಮೃತ್ಯುಂಜಯ ಕಾನಿಟ್ಕರ್, ಶಿಕ್ಷಣ ಸಂಯೋಜಕ ಪರಮೇಶ್ವರಪ್ಪ, ಶಿಕ್ಷಕ ಹಾಗು ಸಿಬ್ಬಂದಿ ವೃಂದದವರು ಪತ್ರಿಕೆಯೊಂದಿಗೆ ಸಂತಸ ಹಂಚಿಕೊಳ್ಳುವ ಜೊತೆಗೆ ಸಂವಾದದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಪ್ರೋತ್ಸಾಹಿಸಿದ್ದಾರೆ.