ಆ.೨ರಂದು ಓಪನ್ ಜಿಮ್ ಉದ್ಘಾಟನೆ
ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸುಮಾರು ೨೫ ಲಕ್ಷ ರು. ಅನುದಾನದಲ್ಲಿ ನಿರ್ಮಿಸಲಾಗಿರುವ ಓಪನ್ ಜಿಮ್ ಆ.೨ರ ಭಾನುವಾರ ಸಂಜೆ ೪ ಗಂಟೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ.
ಈ ಹಿಂದೆ ಸೂಡಾ ಸದಸ್ಯರಾಗಿದ್ದ ಕಾಂಗ್ರೆಸ್ ಮುಖಂಡ ಎಚ್. ರವಿಕುಮಾರ್‌ರವರ ಮನವಿ ಮೇರೆಗೆ ಉದ್ಯಾನವನದಲ್ಲಿ ಹೊರಾಂಗಣ ವ್ಯಾಯಾಮ ಸಾಮಾಗ್ರಿಗಳನ್ನು ಅಳವಡಿಸಲು ೨೫ ಲಕ್ಷ ರು. ಅನುದಾನ ಮಂಜೂರಾತಿಯಾಗಿತ್ತು. ಕೆಲವು ತಿಂಗಳ ಹಿಂದೆ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಉದ್ಘಾಟನೆಗೊಳ್ಳುತ್ತಿದೆ.
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್ ಸುಂದರೇಶ್, ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ಯುವ ಮುಖಂಡ ಬಿ.ಎಸ್ ಬಸವೇಶ್, ಸೂಡಾ ಮಾಜಿ ಸದಸ್ಯ ಎಚ್. ರವಿಕುಮಾರ್ ಸೇರಿದಂತೆ ಇನ್ನಿತರರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
