ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ಎಸ್‌ಐಆರ್ ಕಾರ್ಯ
25 ಮತಗಟ್ಟೆ ಅಧಿಕಾರಿಗಳು ಶೇ.100 ಗುರಿ : ಪ್ರಶಂಸೆ, ಸನ್ಮಾನ
ಭದ್ರಾವತಿ ತಾಲೂಕಿನ ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕರ್ತವ್ಯ ಶೇ.100ರಷ್ಟು ಪೂರ್ಣಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ: ತಾಲೂಕಿನ ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕರ್ತವ್ಯ ಶೇ.100ರಷ್ಟು ಪೂರ್ಣಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ.
112-ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ತ್ವರಿತಗತಿಯಲ್ಲಿ ಸಾಗುತ್ತಿದ್ದು, ಒಟ್ಟು 253 ಮತಗಟ್ಟೆ ಹಾಗು 2,14,907 ಮತದಾರರನ್ನು ಒಳಗೊಂಡಿದೆ. ಸುಮಾರು 15 ದಿನಗಳ ಹಿಂದೆಯೇ ಶೇ.100ರಷ್ಟು ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಸುಮಾರು 1,69,700 ನಮೂನೆಗಳು ಗಣಕೀಕರಣಗೊಂಡಿವೆ.
ಬಹುತೇಕ ಮತಗಟ್ಟೆ ಅಧಿಕಾರಿಗಳು ಪ್ರಸ್ತುತ ಶೇ.100ರಷ್ಟು ಗುರಿ ತಲುಪುವ ಹಂತದಲ್ಲಿದ್ದಾರೆ. ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಶೇ.೧೦೦ ಗುರಿ ಸಾಧಿಸಿದ್ದು, ಪ್ರಶಂಸೆಗೆ ಒಳಗಾಗಿದ್ದಾರೆ. ಮತದಾರರ ನೋಂದಣಾಧಿಕಾರಿಗಳು, ೧೧೨-ಭದ್ರಾವತಿ ವಿಧಾನ ಸಭಾ ಕ್ಷೇತ್ರ ಹಾಗೂ ಉಪ ವಿಭಾಗಾಧಿಕಾರಿಗಳು ಜಿ.ಎಚ್ ಸತ್ಯನಾರಾಯಣ, ತಹಶೀಲ್ದಾರ್ ಪ್ರದೀಪ್ ದೇವಗಿರಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೇರಿದಂತೆ ಇನ್ನಿತರರು ಶೇ.100ರಷ್ಟು ಗುರಿ ಸಾಧಿಸಿರುವ ಮತಗಟ್ಟೆ ಅಧಿಕಾರಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಿದರು.
