ಭದ್ರಗಿರಿಯಲ್ಲಿ ವಿಜೃಂಭಣೆಯಿಂದ ಜರುಗಿದ ಆಡಿ ಕೃತಿಕ ಕಾವಡಿ ಉತ್ಸವ



    ಭದ್ರಾವತಿ: ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಗುರುವಾರ ಆಡಿ ಕೃತಿಕ ಕಾವಡಿ ಉತ್ಸವ ವಿಜೃಂಭಣೆಯಿಂದ ಜರುಗಿತು. 
    ಬೆಳಗಿನ ಜಾವ ೪ ಗಂಟೆಯಿಂದ ವಿಶ್ವರೂಪ ದರ್ಶನ ಮತ್ತು ಅಭಿಷೇಕ, ೫ ರಿಂದ ಉತ್ಸವ ಪೂಜೆ ಹಾಗು ಕಾವಡಿ ಹರಕೆ ಸಮರ್ಪಣೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ ನೆರವೇರಿತು. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ನಂತರ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. 


ಭದ್ರಾವತಿ ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಗುರುವಾರ ಆಡಿ ಕೃತಿಕ ಕಾವಡಿ ಉತ್ಸವ ವಿಜೃಂಭಣೆಯಿಂದ ಜರುಗಿತು. 
    ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗು ಹೊರ ರಾಜ್ಯಗಳಿಂದ ಭಕ್ತರು ಪಾಲ್ಗೊಂಡಿದ್ದರು. ಕಾವಡಿ ಉತ್ಸವ ಅಂಗವಾಗಿ ಭಕ್ತರಿಗಾಗಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನ ಸೇವಾ ಸಮಿತಿ ಹಾಗು ಶ್ರೀ ಭದ್ರಗಿರಿ ಸೇವಾ ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು, ಸೇವಾಕರ್ತರು ಉಪಸ್ಥಿತರಿದ್ದರು. ಕಾವಡಿ ಹರಕೆಹೊತ್ತ ಭಕ್ತರು ಗಮನ ಸೆಳೆದರು. ಕಾಲ್ನಡಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಹರಕೆ ಸಮರ್ಪಿಸಿ ಭಕ್ತಿ ಮೆರದರು.