ಕನಕಮಂಟಪ ಮೈದಾನದಲ್ಲಿ ಆ.೧೫ರಂದು ೮೦ನೇ ಸ್ವಾತಂತ್ರ್ಯೋತ್ಸವ
ಭದ್ರಾವತಿ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ೮೦ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆ.೧೫ರಂದು ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ, ಸಂಸದ ಬಿ.ವೈ ರಾಘವೇಂದ್ರ, ವಿಧಾನಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಬಲ್ಕೀಶ್ ಬಾನು, ಡಿ.ಎಸ್ ಅರುಣ್ ಮತ್ತು ಡಾ. ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರಿನಾರಾಯಣ, ಬಿ.ಎಸ್ ಗಣೇಶ್, ಗೋಪಾಲ್, ಬಿ. ಸಿದ್ದಬಸಪ್ಪ ಮತ್ತು ಸಿ. ಜಯಪ್ಪ ಹೆಬ್ಬಲಗೆರೆ, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಆಶಾಲತಾ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ ಸುರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ತಹಸೀಲ್ದಾರ್ ಪ್ರದೀಪ್ ದೇವಗಿರಿ ಧ್ವಜಾರೋಹಣ ನೆರವೇರಿಸಲಿದ್ದಾರೆ.
