ಮಂಜುಳ ನಿಧನ
ಮಂಜುಳ
ಭದ್ರಾವತಿ : ನಗರದ ಜನ್ನಾಪುರ ಲಿಂಗಾಯತರ ಬೀದಿ ನಿವಾಸಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಉಪಾಧ್ಯಕ್ಷೆ ಮಂಜುಳ(೬೮) ಬುಧವಾರ ಬೆಳಿಗ್ಗೆ ನಿಧನ ಹೊಂದಿದರು.
ಪತಿ ಕೃಷಿಕ ನಂಜುಂಡಪ್ಪ, ಓರ್ವ ಪುತ್ರ ಇದ್ದಾರೆ. ಇವರ ಅಂತ್ಯಕ್ರಿಯೆ ಸಂಜೆ ನಗರಸಭೆ ವ್ಯಾಪ್ತಿಯ ಜಿಂಕ್‌ಲೈನ್‌ನಲ್ಲಿರುವ ಅವರ ತೋಟದಲ್ಲಿ ನೆರವೇರಿತು. ಮಂಜುಳರವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಲಯನ್ಸ್ ಕ್ಲಬ್, ಅಕ್ಕನ ಬಳಗ, ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಇವರ ನಿಧನಕ್ಕೆ ಯುವ ಮುಖಂಡ ಪ್ರವೀಣ್ ಪಟೇಲ್, ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಮಾಜಿ ಅಧ್ಯಕ್ಷ ಎನ್.ಸಿ ಪ್ರಕಾಶ್, ಜೇಡಿಕಟ್ಟೆ ಮರುಳ ಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಮಲ್ಲೇಶ್ವರ ಸಭಾಭವನದ ರುದ್ರೇಶ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಸೇರಿದಂತೆ ಇನ್ನಿತರ ಗಣ್ಯರು ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡು ಸಂತಾಪ ಸೂಚಿಸಿದ್ದಾರೆ.
