೧೫೦ ಮೀಟರ್ ಉದ್ದದ ರಾಷ್ಟ್ರಧ್ವಜದೊಂದಿಗೆ ರ್‍ಯಾಲಿ ನಡೆಸಿ ಸ್ವಾತಂತ್ರ್ಯ ಸಂಭ್ರಮ ಆಚರಿಸಿದ ಶಿಕ್ಷಕರು, ವಿದ್ಯಾರ್ಥಿಗಳು



ಭದ್ರಾವತಿ ನಗರಸಭೆ ವ್ಯಾಪ್ತಿಯ ಭಂಡಾರಹಳ್ಳಿ ಗ್ರಾಮದಲ್ಲಿ ಶನಿವಾರ ಸ್ವಾತಂತ್ರ್ಯೋತ್ಸವ ಸಂಭ್ರಮ ವಿಶೇಷವಾಗಿ ಕಂಡು ಬಂದಿತು. ಇಲ್ಲಿನ ಎಸ್.ವಿ.ಎಸ್ ಕನ್ನಡ ಮತ್ತು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಈ ಬಾರಿ ವಿಶೇಷವಾಗಿ ೧೫೦ ಮೀಟರ್ ಉದ್ದದ ರಾಷ್ಟ್ರಧ್ವಜದೊಂದಿಗೆ ಗ್ರಾಮದೆಲ್ಲೆಡೆ ರ್‍ಯಾಲಿ ನಡೆಸುವ ಮೂಲಕ ಸ್ವಾತಂತ್ರ್ಯೋತ್ಸವ ಹಾಗು ರಾಷ್ಟ್ರಧ್ವಜದ ಮಹತ್ವ ಸಾರಿದರು. 
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಭಂಡಾರಹಳ್ಳಿ ಗ್ರಾಮದಲ್ಲಿ ಶನಿವಾರ ಸ್ವಾತಂತ್ರ್ಯೋತ್ಸವ ಸಂಭ್ರಮ ವಿಶೇಷವಾಗಿ ಕಂಡು ಬಂದಿತು. ಇಲ್ಲಿನ ಎಸ್.ವಿ.ಎಸ್ ಕನ್ನಡ ಮತ್ತು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಈ ಬಾರಿ ವಿಶೇಷವಾಗಿ ೧೫೦ ಮೀಟರ್ ಉದ್ದದ ರಾಷ್ಟ್ರಧ್ವಜದೊಂದಿಗೆ ಗ್ರಾಮದೆಲ್ಲೆಡೆ ರ್‍ಯಾಲಿ ನಡೆಸುವ ಮೂಲಕ ಸ್ವಾತಂತ್ರ್ಯೋತ್ಸವ ಹಾಗು ರಾಷ್ಟ್ರಧ್ವಜದ ಮಹತ್ವ ಸಾರಿದರು. 
    ವಿದ್ಯಾರ್ಥಿಗಳು ರಾಷ್ಟ್ರಧ್ವಜ, ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ, ಏಕತೆ ಸಂದೇಶಗಳನ್ನು ಸಾರುವ ಫಲಕಗಳನ್ನು ಹಿಡಿದು ದೇಶಭಕ್ತಿ ಘೋಷಣೆಗಳೊಂದಿಗೆ ಹೆಜ್ಜೆ ಹಾಕುವ ಮೂಲಕ ಎಲ್ಲರ ಗಮನ ಸೆಳೆದರು. ಪ್ರತಿಯೊಬ್ಬರು ರಾಷ್ಟ್ರದ ಗೌರವಕ್ಕೆ ಧಕ್ಕೆಬಾರದಂತೆ ನಡೆದುಕೊಳ್ಳುವ ಮೂಲಕ  ದೇಶದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡುವ ಸಂಕಲ್ಪ ಕೈಗೊಳ್ಳುವಂತೆ ಕರೆ ನೀಡಿದರು.  

    ವಿದ್ಯಾಸಂಸ್ಥೆ ಅಧ್ಯಕ್ಷರು, ಕಾರ್ಯದರ್ಶಿಗಳು, ಮುಖ್ಯ ಶಿಕ್ಷಕರು ರ್‍ಯಾಲಿಯ ನೇತೃತ್ವವಹಿಸಿದ್ದರು. ಎಸ್.ವಿ.ಎಸ್ ವಿದ್ಯಾಸಂಸ್ಥೆ ಈ ಭಾಗದಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಗಮನ ಸೆಳೆಯುತ್ತಿದೆ. ವಿದ್ಯಾರ್ಥಿಗಳು ಸಮುದಾಯದೊಂದಿಗೆ ಬೆರೆಯಲು, ಸಾಮಾಜಿಕ ಜವಾಬ್ದಾರಿಗಳನ್ನು ಅರಿಯಲು ಪೂರಕವಾಗುವ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ವಿದ್ಯಾಸಂಸ್ಥೆ ಮಹತ್ವದ ಪಾತ್ರವಹಿಸುತ್ತಿದೆ.