ಆ.೨೦ರಂದು ಡಿ. ದೇವರಾಜ ಅರಸು ೧೧೧ನೇ ಜನ್ಮದಿನ
ಭದ್ರಾವತಿ: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ, ಹಿಂದುಳಿದ ವರ್ಗಗಳ ಒಕ್ಕೂಟ ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಆ.೨೦ರ ಗುರುವಾರ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನೇತಾರ, ಸಾಮಾಜಿಕ ಪರಿವರ್ತನೆಯ ಹರಿಕಾರ, ಡಿ. ದೇವರಾಜ ಅರಸು ಅವರ ೧೧೧ನೇ ಜನ್ಮದಿನಾಚರಣೆ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಪೂರ್‍ಯಾನಾಯ್ಕ ಉದ್ಘಾಟಿಸಲಿದ್ದಾರೆ. ಸಚಿವರಾದ ಎಸ್. ಮಧು ಬಂಗಾರಪ್ಪ, ಶಿವರಾಜ್ ತಂಗಡಗಿ, ಸಂಸದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡರು, ಬಲ್ಕೀಶ್ ಬಾನು, ಭಾರತಿ ಶೆಟ್ಟಿ, ಡಿ.ಎಸ್ ಅರುಣ್ ಮತ್ತು ಡಾ. ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರಿನಾರಾಯಣ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಸಿ. ಜಯಪ್ಪ, ಟಿ. ವೆಂಕಟೇಶ್, ತಹಸೀಲ್ದಾರ್ ಪ್ರದೀಪ್ ದೇವಗಿರಿ, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಆಶಾಲತಾ, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೆ.ಜಿ ಶಿವಕುಮಾರ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಟಿ. ರಾಜೇಶ್ವರಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
