ಆ.23ರಂದು ಗಾಣಿಗರ ಸಮಾವೇಶ


    ಭದ್ರಾವತಿ : ನಗರದ ಹೊಸ ಬುಳ್ಳಾಪುರ, ಗಾಣಿಗರ ಸಂಘದಿಂದ ಆ.23ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಗಾಣಿಗರ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗು ಸಮುದಾಯ ಭವನದ ಪ್ರಥಮ ಹಂತದ ಕಟ್ಟಡ ಉದ್ಘಾಟನೆ ನಡೆಯಲಿದೆ. 
    ಗಾಣಿಗರ ಸಮಾಜದ ಶ್ರೀ ಅನಂತಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯ ಕಾರ್ಯಕ್ರಮಗಳು ನಡೆಯಲಿವೆ. ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ಅಖಿಲ ಕರ್ನಾಟಕ ಗಾಣಿಗ ಸಂಘದ ರಾಜ್ಯಾಧ್ಯಕ್ಷ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಂ.ಆರ್ ರಾಜಶೇಖರ್‌ಗಾಣಿಗ, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ಗಾಣಿಗ ಸಂಘದ ಮಾರ್ಗದರ್ಶಕ ಬಿ.ಕೆ ಜಗನ್ನಾಥ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಗಾಣಿಗ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಅನಂತ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗಾಣಿಗ ಸಮಾಜದ ಮುಖಂಡ ಆರ್. ವರದರಾಜ್, ಯತೀಶ್ ಕುಮಾರ್ ಮತ್ತು ಎಂ. ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ಸಮುದಾಯದವರು, ವಿವಿಧ ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳು, ರೈತರು, ಕಾರ್ಮಿಕರು, ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು ಸೇರಿದಂತೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಾಲೂಕು ಗಾಣಿಗರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಕೋರಿದ್ದಾರೆ.