ವಿಐಎಸ್‌ಎಲ್ ನಿವೃತ್ತ ನೌಕರ ಕೆ. ಚಂದ್ರಪ್ಪ ನಿಧನ


                           ಕೆ. ಚಂದ್ರಪ್ಪ 
   ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ಬಾಲಭಾರತಿ ನಿವಾಸಿ ಕೆ. ಚಂದ್ರಪ್ಪ(೭೫) ಗುರುವಾರ ನಿಧನ ಹೊಂದಿದರು. 
ಇವರಿಗೆ ಪತ್ನಿ, ಪುತ್ರ ಹಾಗು ಪುತ್ರಿ ಇದ್ದಾರೆ. ವಿಐಎಸ್‌ಎಲ್ ಕಾರ್ಖಾನೆ ಎಸ್‌ಎಂಎಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರ ನಿಧನಕ್ಕೆ ಗುತ್ತಿಗೆ ಹಾಗು ನಿವೃತ್ತ ಕಾರ್ಮಿಕರು ಸಂತಾಪ ಸೂಚಿಸಿದ್ದಾರೆ. 
 

Mob: 9738801478
: 9482007466