ವಿದ್ಯಾರ್ಥಿಗಳಿಂದ ಪೂಲೀಸ್ ಕವಾಯತ್ತು ಮೈದಾನದಲ್ಲಿ ರಕ್ಷಾ ಬಂಧನ ಹಬ್ಬದ ಸಂಭ್ರಮ


ಭದ್ರಾವತಿ ನಗರದ ಮಿಲಿಟರಿ ಕ್ಯಾಂಪ್ ಪೊಲೀಸ್ ಕವಾಯತ್ತು ಮೈದಾನದಲ್ಲಿ ಶುಕ್ರವಾರ ಬೈಪಾಸ್ ರಸ್ತೆಯಲ್ಲಿರುವ ಟೈಮ್ ಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ರಕ್ಷಾ ಬಂಧನ ಆಚರಿಸುವ ಮೂಲಕ ಸಂಭ್ರಮಿಸಿದರು.
    ಭದ್ರಾವತಿ: ನಗರದ ಮಿಲಿಟರಿ ಕ್ಯಾಂಪ್ ಪೊಲೀಸ್ ಕವಾಯತ್ತು ಮೈದಾನದಲ್ಲಿ ಶುಕ್ರವಾರ ಬೈಪಾಸ್ ರಸ್ತೆಯಲ್ಲಿರುವ ಟೈಮ್ ಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ರಕ್ಷಾ ಬಂಧನ ಆಚರಿಸುವ ಮೂಲಕ ಸಂಭ್ರಮಿಸಿದರು.
    ಸಮಾಜದ ಶಾಂತಿ  ಸುವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ  ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಹಬ್ಬ ವಿಶಿಷ್ಟವಾಗಿ ಆಚರಿಸಿದರು.


    ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಹಾಗೂ ವೃತ್ತ ನಿರೀಕ್ಷಕರು, ವಿವಿಧ ಠಾಣೆಗಳ ಉಪನಿರೀಕ್ಷಕರು ಹಾಗೂ  ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಹಬ್ಬದ ಶುಭ ಕೋರಿದರು.