ದೇವರಾಜ ಅರಸುರವರು ಶೋಷಿತರು, ಹಿಂದುಳಿದವರ ಪರವಾದ ನಿಲುವುಗಳನ್ನು ಹೊಂದಿದ್ದರು : ಎ. ಮುರುಗನ್


ಭದ್ರಾವತಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ, ಹಿಂದುಳಿದ ವರ್ಗಗಳ ಒಕ್ಕೂಟ ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನೇತಾರ, ಸಾಮಾಜಿಕ ಪರಿವರ್ತನೆಯ ಹರಿಕಾರ, ಡಿ. ದೇವರಾಜ ಅರಸು ಅವರ ೧೧೧ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ದೊಣಬಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎ. ಮುರುಗನ್ ಉಪನ್ಯಾಸ ನೀಡಿದರು. 
    ಭದ್ರಾವತಿ: ಸಮಾಜದಲ್ಲಿನ ಶೋಷಿತರು ಹಾಗು ಹಿಂದುಳಿದವರ ಬಗ್ಗೆ ಹೆಚ್ಚಿನ ಕಾಳಜಿ ಮತ್ತು ಅವರ ಪರವಾದ ನಿಲುವುಗಳನ್ನು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರು ಹೊಂದಿದ್ದರು. ಈ ಹಿನ್ನಲೆಯಲ್ಲಿ ತಮ್ಮ ಆಡಳಿತ ಅವಧಿಯಲ್ಲಿ ಹಲವು ಜನಪರವಾದ ಯೋಜನೆಗಳನ್ನು ಹಾಗು ಕಾಯ್ದೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾದರು ಎಂದು ತಾಲೂಕಿನ ದೊಣಬಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎ. ಮುರುಗನ್ ಹೇಳಿದರು. 
    ಅವರು ಗುರುವಾರ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ, ಹಿಂದುಳಿದ ವರ್ಗಗಳ ಒಕ್ಕೂಟ ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನೇತಾರ, ಸಾಮಾಜಿಕ ಪರಿವರ್ತನೆಯ ಹರಿಕಾರ, ಡಿ. ದೇವರಾಜ ಅರಸು ಅವರ ೧೧೧ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. 
    ಡಿ. ದೇವರಾಜ ಅರಸು ಅವರ ಬಾಲ್ಯ ಜೀವನ, ವಿದ್ಯಾಭ್ಯಾಸ, ರಾಜಕಾರಣ ಎಲ್ಲವೂ ಇಂದಿನ ಸಮಾಜಕ್ಕೆ, ಆಡಳಿತ ನಡೆಸುತ್ತಿರುವ ಸರ್ಕಾರಗಳಿಗೆ ಮಾದರಿಯಾಗಿವೆ ಎಂದರು. 
    ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಮಾತನಾಡಿ, ಡಿ. ದೇವರಾಜ ಅರಸು ಅವರ ಆಡಳಿತ ವ್ಯವಸ್ಥೆ ಎಂದಿಗೂ ಮಾದರಿಯಾಗಿದೆ. ಇಂತಹ ಧೀಮಂತ ನಾಯಕನನ್ನು ಸಮಾಜದ ಪ್ರತಿಯೊಬ್ಬರು ಸ್ಮರಿಸಬೇಕೆಂದರು. 
    ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರಿನಾರಾಯಣ, ಹಿರಿಯ ಸದಸ್ಯ ಬಿ.ಕೆ ಮೋಹನ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಸಿ. ಜಯಪ್ಪ, ಟಿ. ವೆಂಕಟೇಶ್, ತಹಸೀಲ್ದಾರ್ ಗ್ರೇಡ್-೨ ಸುರೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಆಶಾಲತಾ, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೆ.ಜಿ ಶಿವಕುಮಾರ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಟಿ. ರಾಜೇಶ್ವರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.