ಅಪರಾಧ ಪ್ರಕರಣಗಳು ಹೆಚ್ಚಳ : ಪೊಲೀಸ್ ಉಪಾಧೀಕ್ಷಕರ ಕಛೇರಿಗೆ ಮುತ್ತಿಗೆ ಹಾಕಿ ಬಿಜೆಪಿ ಪ್ರತಿಭಟನೆ

ಮಕ್ಕಳು, ಮಹಿಳೆಯರು ಸೇರಿದಂತೆ ನಾಗರೀಕರ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ 


ಭದ್ರಾವತಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಗುರುವಾರ ಬೆಳಿಗ್ಗೆ ಮಿಲ್ಟ್ರಿಕ್ಯಾಂಪ್ ಪೊಲೀಸ್ ಉಪಾಧೀಕ್ಷಕರ ಕಛೇರಿ ಬಳಿ ಬಿಜೆಪಿ ನಗರ ಹಾಗು ಗ್ರಾಮಾಂತರ ಮಂಡಲದಿಂದ ಪ್ರತಿಭಟನೆ ನಡೆಸಲಾಯಿತು. 
    ಭದ್ರಾವತಿ : ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಗುರುವಾರ ಬೆಳಿಗ್ಗೆ ಮಿಲ್ಟ್ರಿಕ್ಯಾಂಪ್ ಪೊಲೀಸ್ ಉಪಾಧೀಕ್ಷಕರ ಕಛೇರಿ ಬಳಿ ಬಿಜೆಪಿ ನಗರ ಹಾಗು ಗ್ರಾಮಾಂತರ ಮಂಡಲದಿಂದ ಪ್ರತಿಭಟನೆ ನಡೆಸಲಾಯಿತು. 
    ಕೊಲೆ, ಸುಲಿಗೆ ಅಪರಾಧ ಪ್ರಕರಣಗಳು, ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸೇವನೆ, ಮಾರಾಟ ಹಾಗು ಓ.ಸಿ ಮಟ್ಕಾ, ಇಸ್ಪೀಟ್ ಸೇರಿದಂತೆ ಇನ್ನಿತರ ಜೂಜಾಟ ಕ್ಷೇತ್ರದಲ್ಲಿ ಮಿತಿಮೀರಿದ್ದು, ಸಾರ್ವಜನಿಕರು ನೆಮ್ಮದಿಯಿಂದ ಬದುಕುವುದು ಕಷ್ಟಕರವಾಗಿದೆ. ಇಲ್ಲಿನ ಪೊಲೀಸ್ ಇಲಾಖೆ  ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಭಟನೆಯಲ್ಲಿ ಆರೋಪಿಸಲಾಯಿತು. 


ಭದ್ರಾವತಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಗುರುವಾರ ಬೆಳಿಗ್ಗೆ ಮಿಲ್ಟ್ರಿಕ್ಯಾಂಪ್ ಪೊಲೀಸ್ ಉಪಾಧೀಕ್ಷಕರ ಕಛೇರಿ ಬಳಿ ಬಿಜೆಪಿ ನಗರ ಹಾಗು ಗ್ರಾಮಾಂತರ ಮಂಡಲದಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ ಕಾರಿಯಪ್ಪ ಅವರಿಗೆ ದೂರು ಸಲ್ಲಿಸಲಾಯಿತು. 
    ಇಲ್ಲಿನ ಪೊಲೀಸರ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ತಕ್ಷಣ ಓ.ಸಿ ಮಟ್ಕಾ, ಇಸ್ಪೀಟ್ ಸೇರಿದಂತೆ ಜಾಜಾಟಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಮಿತಿಮೀರಿರುವ ಗಾಂಜಾ ಸೇವನೆ ಹಾಗು ಮಾರಾಟಕ್ಕೆ ಸಂಪೂರ್ಣವಾಗಿ ಕಡಿವಾಣ ಹಾಕಿ ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಶಾಲಾ-ಕಾಲೇಜುಗಳ ಬಳಿ ವಿದ್ಯಾರ್ಥಿನಿಯರ ಸುರಕ್ಷತೆಗೆ ಹೆಚ್ಚಿನ ಗಮನ ನೀಡಬೇಕೆಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ ಕಾರಿಯಪ್ಪ ಅವರಿಗೆ ದೂರು ಸಲ್ಲಿಸಲಾಯಿತು. 
    ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಪ್ರಮುಖರಾದ ಕೂಡ್ಲಿಗೆರೆ ಹಾಲೇಶ್, ಮಂಗೋಟೆ ರುದ್ರೇಶ್, ಜಿ. ಆನಂದಕುಮರ್, ಬಿ.ಜಿ ರಾಮಲಿಂಗಯ್ಯ, ಎಂ. ಮಂಜುನಾಥ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ರಘುರಾವ್, ಮೊಸರಹಳ್ಳಿ ಅಣ್ಣಪ್ಪ, ಹನುಮಂತ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಸರಸ್ವತಿ ವಿಜಯ್ ಕುಮಾರ್ ಸೇರಿದಂತೆ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ, ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಕಾರ್ಯಕರ್ತೆಯರು ಹಾಗೂ ಪಕ್ಷದ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.