ಉಚಿತ ಮಹಿಳಾ ಟೈಲರಿಂಗ್ ತರಬೇತಿಗೆ ಅರ್ಜಿ
ಭದ್ರಾವತಿ: ವಿಐಎಸ್‌ಎಲ್ (ಸೈಲ್) ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಸಹಯೋಗದಲ್ಲಿ ಸೆಪ್ಟೆಂಬರ್‌ನಲ್ಲಿ 30 ದಿನಗಳ ಉಚಿತ ಮಹಿಳಾ ಟೈಲರಿಂಗ್ ತರಬೇತಿ ಶಿಬಿರ ಆಯೋಜಿಸಲಾಗಿದೆ.
18 ರಿಂದ 40 ವರ್ಷ ವಯಸ್ಸಿನ ನಿರುದ್ಯೋಗ ಯುವತಿಯರು ಹಾಗೂ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಪ್ರದೇಶದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಡ ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುವುದು.
ಆಸಕ್ತರು ಆ.31ರಂದು ಮಧ್ಯಾಹ್ನ 12 ಗಂಟೆಗೆ ವಿಐಎಸ್‌ಎಲ್ ಇಸ್ಪಾತ್ ಮಹಿಳಾ ಸಮಾಜದ ಕಛೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವುದು. ಹೆಚ್ಚಿನ ಮಾಹಿತಿಗೆ 9483061981 ಸಂಪರ್ಕಿಸಬಹುದು.
