ವಿಐಎಸ್‌ಎಲ್ ನಿವೃತ್ತ ಉದ್ಯೋಗಿ ಕೊಂಡ ಪಂಪಣ್ಣ ನಿಧನ
ಕೊಂಡ ಪಂಪಣ್ಣ
ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ಸಿದ್ದಾರೂಢ ನಗರದ ನಿವಾಸಿ ಕೊಂಡ ಪಂಪಣ್ಣ(೮೦) ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು.
ಪತ್ನಿ, ಇಬ್ಬರು ಗಂಡು ಮಕ್ಕಳು ಇದ್ದಾರೆ. ಇವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ ನೆರವೇರಲಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದವರಾದ ಪಂಪಣ್ಣರವರು ವಿಐಎಸ್‌ಎಲ್ ಕಾರ್ಖಾನೆ ಸುಮಾರು ೪೦ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಅಲ್ಲದೆ ತಾಲೂಕು ಬಲಿಜ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಇವರ ನಿಧನಕ್ಕೆ ತಾಲೂಕು ಬಲಿಜ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
