ಆ.೬ರಂದು ಮುಂಗಾರು ಕಾವ್ಯಧಾರೆ
ಭದ್ರಾವತಿ : ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯಿಂದ ಆ.೬ರ ಗುರುವಾರ ಸಂಜೆ ೫.೩೦ಕ್ಕೆ ನ್ಯೂಟೌನ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮುಂಗಾರು ಕಾವ್ಯಧಾರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಹೊಸಹಳ್ಳಿ ದಾಳೇಗೌಡ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಚ್. ತಿಮ್ಮಪ್ಪ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್ ರೇವಣಪ್ಪ, ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಕೆ. ನಾಗರಾಜ್ ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ರಮ್ಯಾ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಕೋರಿದ್ದಾರೆ.
