ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕರಾಗಿ ಬಿ.ಕೆ ಶಿವಕುಮಾರ್ ಆಯ್ಕೆ

ಮಹಾಮಂಡಳ ಅಧ್ಯಕ್ಷ ಜಿ.ಟಿ ದೇವೇಗೌಡ, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ 


ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ನಿರ್ದೇಶಕರಾಗಿ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ, ಭದ್ರಾವತಿ ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ.  ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಅಧ್ಯಕ್ಷರಾದ ಶಾಸಕ ಜಿ.ಟಿ ದೇವೇಗೌಡ ಹಾಗು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಹಕಾರ ಕೋರಿದರು. 
    ಭದ್ರಾವತಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ನಿರ್ದೇಶಕರಾಗಿ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ, ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. 
    ಶಿವಕುಮಾರ್‌ರವರು ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕರು ಸಹ ಆಗಿದ್ದು, ಶಿವಮೊಗ್ಗ ಜಿಲ್ಲಾ ಸಹಕಾರ ಕ್ಷೇತ್ರದಿಂದ ಪ್ರತಿನಿಧಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. 
     ನೂತನ ನಿರ್ದೇಶಕ ಶಿವಕುಮಾರ್‌ರವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಅಧ್ಯಕ್ಷರಾದ ಶಾಸಕ ಜಿ.ಟಿ ದೇವೇಗೌಡ ಹಾಗು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಹಕಾರ ಕೋರಿದರು.
    ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಕ್ಷರಿ, ಟಿಎಪಿಸಿಎಂಎಸ್ ಅಧ್ಯಕ್ಷ ಎಚ್ ಲೋಕೇಶಪ್ಪ , ಮೆಸ್ಕಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ, ಡಿಸಿಸಿ ಬ್ಯಾಂಕ್ ನಿರ್ದೆಶಕ ದಶರಥ ಗಿರಿ, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.