ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ಅಂಡಾಳ್ ಉತ್ಸವ


ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ವೇದಬ್ರಹ್ಮ ಶ್ರೀ ರಂಗನಾಥಶರ್ಮರವರ ನೇತೃತ್ವದಲ್ಲಿ ಶುಕ್ರವಾರ ಆಂಡಾಳ್ ಜಯಂತೋತ್ಸವ ವಿಜೃಂಭಣೆಯಿಂದ ಜರುಗಿತು. 
    ಭದ್ರಾವತಿ: ಹಳೇನಗರದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ವೇದಬ್ರಹ್ಮ ಶ್ರೀ ರಂಗನಾಥಶರ್ಮರವರ ನೇತೃತ್ವದಲ್ಲಿ ಶುಕ್ರವಾರ ಆಂಡಾಳ್ ಜಯಂತೋತ್ಸವ ವಿಜೃಂಭಣೆಯಿಂದ ಜರುಗಿತು. 
    ಆಂಡಾಳ್ ಉತ್ಸವದ ಪ್ರಯುಕ್ತ ಬೆಳಗ್ಗೆ ಪಂಚಾಮೃತ ಅಭಿಷೇಕ, ನಂತರ ದೇವಸ್ಥಾನದ ಪ್ರಾಂಗಣದೊಳಗೆ ಹಾಗು ಬ್ರಾಹ್ಮಣರ ಬೀದಿಯಲ್ಲಿ ಉತ್ಸವ ಮೆರವಣಿಗೆ ನಡೆಸಲಾಯಿತು. ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ವೇದ ಪಾಠಶಾಲೆಯಿಂದ ವೇದಪಾರಾಯಣ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. 
    ಆಂಡಾಳ್ ಸಮಿತಿ ಅಧ್ಯಕ್ಷ ಎಂ.ಎಸ್ ಜನಾರ್ಧನ್ ಅಯ್ಯಂಗಾರ್, ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಿ. ರಮಾಕಾಂತ್, ದೇವಸ್ಥಾನದ ಸಹಾಯಕ ಅರ್ಚಕ ಶ್ರೀನಿವಾಸನ್, ಕೃಷ್ಣಪ್ಪ ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.