ಸುಲ್ತಾನಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯಿಂದ ಜರುಗಿದ ೮೦ನೇ ಸ್ವಾತಂತ್ರ್ಯೋತ್ಸವ
ಭದ್ರಾವತಿ ತಾಲೂಕಿನ ಗ್ರಾಮೀಣ ಭಾಗದ ಸುಲ್ತಾನಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೮೦ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ : ತಾಲೂಕಿನ ಗ್ರಾಮೀಣ ಭಾಗದ ಸುಲ್ತಾನಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೮೦ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ವಿಜೃಂಭಣೆಯಿಂದ ಜರುಗಿತು.
ಶಿಕ್ಷಕರು, ಸಿಬ್ಬಂದಿ ವೃಂದದವರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗು ಸದಸ್ಯರೊಂದಿಗೆ ಶಾಲೆಯ ಮಕ್ಕಳು ಗ್ರಾಮದ ಬೀದಿಗಳಲ್ಲಿ ಪ್ರಭಾತ್ ಬೇರಿ ನಡೆಸಿದರು. ಪುಟಾಣಿ ಮಕ್ಕಳು ಘೋಷಣೆಗಳನ್ನು ಕೂಗುತ್ತಾ ಸ್ವಾತಂತ್ರ್ಯೋತ್ಸವದ ಮಹತ್ವದ ಸಾರಿದರು.
ಎ ಸ್‌ಡಿಎಂಸಿ ಉಪಾಧ್ಯಕ್ಷ ನಾಗರಾಜ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಸಲೀನಾ ಮಿರಿಂಡ ಸ್ವಾಗತಿಸಿ, ಶಿಕ್ಷಕ ಎಂ.ಆರ್ ರೇವಣಪ್ಪ ವಂದಿಸಿದರು.
