ವಿಐಎಸ್‌ಎಲ್ ಕಾರ್ಖಾನೆಯಿಂದ ೮೦ನೇ ಸ್ವಾತಂತ್ರ್ಯೋತ್ಸವ
ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ೮೦ನೇ ವರ್ಷದ ಸ್ವಾತಂತ್ರ್ಯೋತ್ಸವ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಬೆಳಿಗ್ಗೆ ೯ ಗಂಟೆಗೆ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಅನೂಪ್‌ಕುಮಾರ್ ದ್ವಜಾರೋಹಣ ನೆರವೇರಿಸಲಿದ್ದು, ನಂತರ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಕಾರ್ಖಾನೆ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು, ಭದ್ರತಾ ಸಿಬ್ಬಂದಿಗಳು, ಇಸ್ಪಾತ್ ಮಹಿಳಾ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಾರ್ವಜನಿಕ ಸಂಪರ್ಕಾಧಿಕಾರಿ ನವೀನ್ ರಾಹುಲ್ ಕೋರಿದ್ದಾರೆ.
Ananthakumara, Reporter, Kannadaprabha,
NDK/31A, Near, Sri Satyasayi Baba school,
Newtown, Bhadravathi:-577301(Tq)
Shimoga(Dis)
Mob: 9738801478
: 9482007466