ಆ.೨೦ರಂದು ಡಿ. ದೇವರಾಜ ಅರಸು ಜನ್ಮದಿನ : ಪೂರ್ವಭಾವಿ ಸಭೆ
ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ. ದೇವರಾಜ ಅರಸುರವರ ಜನ್ಮದಿನ ಆ.೨೦ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ಬುಧವಾರ ಭದ್ರಾವತಿ ತಾಲೂಕು ಕಛೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಭದ್ರಾವತಿ : ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ. ದೇವರಾಜ ಅರಸುರವರ ಜನ್ಮದಿನ ಆ.೨೦ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ಬುಧವಾರ ತಾಲೂಕು ಕಛೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ತಹಸೀಲ್ದಾರ್ ಗ್ರೇಡ್-೨ ಸುರೇಶ್‌ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಡಿ. ದೇವರಾಜ ಅರಸು ಜನ್ಮದಿನ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುವುದು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಗೌರವಿಸುವುದು. ಡಿ. ದೇವರಾಜ ಅರಸುರವರ ವಿಚಾರಧಾರೆಗಳು ಯುವ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಕ್ರಮ ಕೈಗೊಳ್ಳುವುದು. ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜನ್ಮದಿನ ಆಚರಿಸಲು ತೀರ್ಮಾನ ಕೈಗೊಳ್ಳಲಾಯಿತು.
ಸಭೆಯಲ್ಲಿ ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ಉಪ ತಹಸೀಲ್ದಾರ್ ಮಂಜಾನಾಯ್ಕ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೈಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘಟನೆ ಪ್ರಮುಖರಾದ ಪ್ರಾಂಶುಪಾಲರಾದ ಡಾ. ಹರಿಣಾಕ್ಷಿ, ವಿ. ವಿನೋದ್, ನಾರಾಯಣ ಐಹೊಳೆ, ವೆಂಕಟೇಶ್, ಚಂದ್ರಶೇಖರ್, ಗಿರಿನಾಯ್ಡು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
