ಮಗನ ಚಿಕಿತ್ಸೆಗೆ ಹಣ ನೀಡದೆ ಹಲ್ಲೆ ನಡೆಸಿದ ಪತಿ ವಿರುದ್ಧ ದೂರು
ಭದ್ರಾವತಿ: ಮಗನ ಕಿವಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಣ ಕೇಳಿದ ಪತ್ನಿಯ ಮೇಲೆ ಪತಿ ಹಲ್ಲೆ ನಡೆಸಿದ್ದಾನೆಂದು ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ.೧೧ರಂದು ಮಜ್ಜೇನಹಳ್ಳಿಯಲ್ಲಿ ಕೆಲಸ ಮುಗಿಸಿಕೊಂಡು ರಾತ್ರಿ ೯.೩೦ರ ಸಮಯದಲ್ಲಿ ಮನೆಗೆ ಬಂದಿದ್ದ ಪತಿಗೆ ಮಗನ ಕಿವಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಣ ಕೇಳಿದ್ದು, ಹಣ ನೀಡದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ. ಈ ಹಿನ್ನಲೆಯಲ್ಲಿ ನನ್ನ ಪತಿಯನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸುವ ಮೂಲಕ ನನ್ನ ತಂಟೆಗೆ ಬರದಂತೆ ತಿಳುವಳಿಕೆ ನೀಡುವ ಜೊತೆಗೆ ನನಗೆ ರಕ್ಷಣೆ ನೀಡಬೇಕೆಂದು ಅನ್ವರ್ ಕಾಲೋನಿ ಮುಸ್ಲಿಂ ಸಮುದಾಯದ ಮಹಿಳೆಯೊಬ್ಬರು ಪೊಲೀಸರಿಗೆ ಕೋರಿದ್ದರು.
ಪೊಲೀಸರು ನ್ಯಾಯಾಲಯದಿಂದ ಅನುಮತಿ ಕೋರಿದ್ದು, ಆ.೧೭ರಂದು ಆದೇಶವಾಗಿರುತ್ತದೆ. ಈ ಹಿನ್ನಲೆಯಲ್ಲಿ ಆ.೧೯ರಂದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.
