ಗಾಂಜಾ ಮಾದಕ ವಸ್ತು ಸೇವನೆ : ಪ್ರಕರಣ ದಾಖಲು


    ಭದ್ರಾವತಿ: ನಗರದ ನ್ಯೂಕಾಲೋನಿ ಅಪ್‌ಸೈರ್ ಬಿಲ್ಡಿಂಗ್ ಸಮೀಪ ಗಾಂಜಾ ಮಾದಕ ವಸ್ತು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ. 
    ಬೊಮ್ಮನಕಟ್ಟೆ ೨ನೇ ಡಿವಿಜನ್ ನಿವಾಸಿ, ಸುಮಾರು ೩೨ ವರ್ಷ ವಯಸ್ಸಿನ ವ್ಯಕ್ತಿಯೋರ್ವ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿರುವ ಕುರಿತು ಆ.೯ರ ಭಾನುವಾರ ಸಂಜೆ ೫ ಗಂಟೆ ಸಮಯದಲ್ಲಿ ಮಾಹಿತಿ ಬಂದಿದ್ದು, ನ್ಯೂಟೌನ್ ಠಾಣೆ ಸಿಬ್ಬಂದಿಗಳಾದ ಹಾಲಪ್ಪ ಮತ್ತು ಪ್ರಸನ್ನರವರು ಠಾಣಾ ಉಪನಿರೀಕ್ಷಕ ಟಿ. ರಮೇಶ್‌ರವರ ಮಾರ್ಗದರ್ಶನದಲ್ಲಿ ಸ್ಥಳಕ್ಕೆ ತೆರಳಿ ಆತನನ್ನು ವಶಕ್ಕೆ ಪಡೆದು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದ್ದು, ಗಾಂಜಾ ಮಾದಕ ವಸ್ತು ಸೇವನೆ ದೃಢಪಟ್ಟಿರುವ ಹಿನ್ನಲೆಯಲ್ಲಿ ಆತನ ವಿರುದ್ದ ಸ್ವ ದೂರು ತಯಾರಿಸಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.