ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : 5 ವರ್ಷ ಜೈಲು, ದಂಡ
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : 5 ವರ್ಷ ಜೈಲು, ದಂಡ
ಭದ್ರಾವತಿ : 11 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿಯೋರ್ವನಿಗೆ 5 ವರ್ಷ ಜೈಲು ಶಿಕ್ಷೆ ಹಾಗು ದಂಡ ವಿಧಿಸಿ ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಎಫ್.ಟಿ.ಎಸ್.ಸಿ-1) ತೀರ್ಪು ನೀಡಿದೆ.
2024ರಲ್ಲಿ ತಾಲ್ಲೂಕಿನ 49 ವರ್ಷದ ವ್ಯಕ್ತಿಯೋರ್ವ 11 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆಗಿನ ತನಿಖಾಧಿಕಾರಿಯಾಗಿದ್ದ ಠಾಣಾ ಉಪ ನಿರೀಕ್ಷಕಿ ಕವಿತಾರವರು ಪ್ರಕರಣದ ತನಿಖೆ ಪೂರೈಸಿ ದೋಷಾರೋಪಣಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ರವರು ಆರೋಪ ಸಾಬೀತಾದ ಹಿನ್ನಲೆಯಲ್ಲಿ 5 ವರ್ಷ ಕಾರಾಗೃಹವಾಸ ಮತ್ತು 15,000 ರೂ. ದಂಡ ವಿಧಿಸಿ ಹಾಗೂ ನೊಂದ ಬಾಲಕಿಗೆ 50,000 ರೂ. ಪರಿಹಾರ ನೀಡಲು ಆದೇಶಿಸಿರುತ್ತಾರೆ. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ರವರು ವಾದ ಮಂಡಿಸಿದ್ದರು.
