ಉಕ್ಕುಂದ ಗ್ರಾಮದಲ್ಲಿ 65 ಲಕ್ಷ ರು. ವೆಚ್ಚದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಕ್ಕುಂದ ಗ್ರಾಮದಲ್ಲಿ ಕಾಡಂಚಿನ ಗ್ರಾಮಗಳ ಜನರ ಆರೋಗ್ಯದ ಅಗತ್ಯತೆಗಳನ್ನು ಪೂರೈಸಲು ಸುಮಾರು 65 ಲಕ್ಷ ರು. ವೆಚ್ಚದಲ್ಲಿ ಆರೋಗ್ಯ ಕೇಂದ್ರ ನಿರ್ಮಿಸಲಾಗುತ್ತಿದ್ದು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಗುದ್ದಲಿ ಪೂಜೆ ನೆರವೇರಿಸಿದರು.
ಭದ್ರಾವತಿ: ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಕ್ಕುಂದ ಗ್ರಾಮದಲ್ಲಿ ಕಾಡಂಚಿನ ಗ್ರಾಮಗಳ ಜನರ ಆರೋಗ್ಯದ ಅಗತ್ಯತೆಗಳನ್ನು ಪೂರೈಸಲು ನೆರವಾಗುವಂತೆ ಆಯುಷ್ಮಾನ್ ಆರೋಗ್ಯ ಕೇಂದ್ರ ನಿರ್ಮಿಸಲಾಗುತ್ತಿದೆ.
ಸುಮಾರು 65 ಲಕ್ಷ ರು. ವೆಚ್ಚದಲ್ಲಿ ಆರೋಗ್ಯ ಕೇಂದ್ರ ನಿರ್ಮಿಸಲಾಗುತ್ತಿದ್ದು, ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ಭಾಗದ ಗ್ರಾಮಗಳ ಗ್ರಾಮಸ್ಥರು ತಮ್ಮ ಆರೋಗ್ಯದ ಅಗತ್ಯತೆಗಳಿಗೆ ನಗರ ಪ್ರದೇಶ ಅವಲಂಬಿಸುವಂತಾಗಿದೆ. ಈ ಹಿನ್ನಲೆಯಲ್ಲಿ ಬಹಳ ವರ್ಷಗಳಿಂದ ಆರೋಗ್ಯ ಕೇಂದ್ರ ನಿರ್ಮಿಸುವಂತೆ ಒತ್ತಾಯಿಸಿಕೊಂಡು ಬರಲಾಗುತ್ತಿತ್ತು. ಇದೀಗ ಆರೋಗ್ಯ ಕೇಂದ್ರ ನಿರ್ಮಿಸಲಾಗುತ್ತಿದೆ.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಸಾಮಾಜಿಕ ಹೋರಾಟಗಾರ ಶಿವಕುಮಾರ್, ಆರೋಗ್ಯ ಇಲಾಖೆ ವೈದ್ಯಾಧಿಕಾರಿ ಡಾ. ಗಿರೀಶ್, ದಾದಿಯರು, ಆಶಾ ಕಾರ್ಯಕರ್ತೆಯರು, ಗ್ರಾಮದ ಮುಖಂಡರಾದ ನಾಗಣ್ಣ, ಸಿದ್ದರಾಜು, ನಾಗೇಶ, ಚಿನ್ನರಾಜು, ಈರೇಗೌಡ, ಚನ್ನೇಗೌಡ, ಪಾಂಡು, ಪ್ರಭು, ಹರೀಶ ಸೇರಿದಂತೆ ಮತ್ತಿತ್ತರಿದ್ದರು.
