ಯುಬಿಎಸ್‌ಎಫ್ ಯೋಜನೆಯಡಿ ಪೊಲೀಸ್ ಇಲಾಖೆಗೆ ೪ ವಾಹನಗಳ ಹಸ್ತಾಂತರ

ಶಾಸಕ ಬಿ.ಕೆ ಸಂಗಮೇಶ್ವರ್, ಜಿಲ್ಲಾ ಪೊಲೀಸ್ ಅಧೀಕ್ಷಕರ ನಿಖಿಲ್ .ಬಿ ಸೇರಿದಂತೆ ಗಣ್ಯರ ಉಪಸ್ಥಿತಿ


ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹಯೋಗದೊಂದಿಗೆ ಯೂನಿಯನ್ ಬ್ಯಾಂಕ್ ಸೋಷಿಯಲ್ ಫೌಂಡೇಷನ್(ಯುಬಿಎಸ್‌ಎಫ್)ವತಿಯಿಂದ ಭದ್ರಾವತಿ ಪೊಲೀಸ್ ಉಪವಿಭಾಗಕ್ಕೆ ಮಂಗಳವಾರ ೪ ವಾಹನಗಳನ್ನು ಹಸ್ತಾಂತರಿಸಲಾಯಿತು. 
    ಭದ್ರಾವತಿ : ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹಯೋಗದೊಂದಿಗೆ ಯೂನಿಯನ್ ಬ್ಯಾಂಕ್ ಸೋಷಿಯಲ್ ಫೌಂಡೇಷನ್(ಯುಬಿಎಸ್‌ಎಫ್)ವತಿಯಿಂದ ಪೊಲೀಸ್ ಉಪವಿಭಾಗಕ್ಕೆ ಮಂಗಳವಾರ ೪ ವಾಹನಗಳನ್ನು ಹಸ್ತಾಂತರಿಸಲಾಯಿತು. 
    ಹಳೇನಗರದ ತಾಲೂಕು ಕಛೇರಿ, ಮಿನಿ ವಿಧಾನಸೌಧ ಹಿಂಭಾಗದ ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ .ಬಿ ಅವರಿಗೆ ವಾಹನಗಳನ್ನು ಹಸ್ತಾಂತರಿಸುವ ಮೂಲಕ ಹಸಿರು ನಿಶಾನೆ ತೋರಿಸಿದರು. 
    ನಗರದ ವಿವಿಧೆಡೆ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆಗೆ ಅನುದಾನ ಸೇರಿದಂತೆ ಪೊಲೀಸ್ ಇಲಾಖೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಶಾಸಕರು ಭರವಸೆ ನೀಡಿದರು. 


    ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎ.ಜಿ ಕಾರಿಯಪ್ಪ, ನಗರಸಭೆ ಉಪಾಧ್ಯಕ್ಷ ಬಷೀರ್ ಅಹಮದ್, ಪೌರಾಯುಕ್ತ ಕೆ.ಎನ್ ಹೇಮಂತ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆಶಾಲತಾ, ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ಮೆಸ್ಕಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ನಗರಸಭೆ ಸದಸ್ಯರಾದ ಚನ್ನಪ್ಪ, ಸುದೀಪ್ ಕುಮಾರ್, ಮುಖಂಡರಾದ ಬಿ.ಎಸ್ ಬಸವೇಶ್, ವೈ. ನಟರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಉಪವಿಭಾಗದ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಕಾರ್ಯಕ್ರಮದ ನೇತೃತ್ವವಹಿಸಿದ್ದರು. ಪೊಲೀಸ್ ನಗರ ವೃತ್ತ ನಿರೀಕ್ಷಕರು, ವಿವಿಧ ಠಾಣೆಗಳ ಉಪ ನಿರೀಕ್ಷಕರು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.