ಮಾಜಿ ಶಾಸಕ ಎಂ.ಜೆ ಅಪ್ಪಾಜಿ ೬ನೇ ವರ್ಷದ ಪುಣ್ಯಸ್ಮರಣೆ : ರಕ್ತದಾನ, ನೇತ್ರದಾನ
ಭದ್ರಾವತಿ ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಬುಧವಾರ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ೬ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಬುಧವಾರ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ೬ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರು, ಅಭಿಮಾನಿಗಳು ಅಪ್ಪಾಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು.
ಪುಣ್ಯಸ್ಮರಣೆ ಅಂಗವಾಗಿ ರಕ್ತದಾನ, ನೇತ್ರದಾನ ಶಿಬಿರ ಆಯೋಜಿಸಲಾಗಿತ್ತು. ಮಧ್ಯಾಹ್ನ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.
ಪಕ್ಷದ ತಾಲೂಕು ಅಧ್ಯಕ್ಷ ಆರ್. ಕುರುಣಾಮೂರ್ತಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಮುಖಂಡರಾದ ಟಿ. ಚಂದ್ರೇಗೌಡ, ಶಿವಾಜಿರಾವ್ ಗಾಯಕ್ವಾಡ್, ರಘುನಾಥರಾವ್ ಗಿಡ್ಡೆ, ಕರಿಯಪ್ಪ, ಚನ್ನಪ್ಪ, ಹುಚ್ಚಪ್ಪ, ಎನ್. ಕೃಷ್ಣಪ್ಪ, ಎಂ.ಎ ಅಜಿತ್, ಅರುಣ್‌ಕುಮಾರ್, ಮಧುಸೂದನ್, ಧರ್ಮರಾಜ್, ವಿಶಾಲಾಕ್ಷ್ಮಿ, ಭಾಗ್ಯಮ್ಮ ಮಂಜುನಾಥ್, ಸಾವಿತ್ರಿ ಪುಟ್ಟೇಗೌಡ, ಪಾರ್ಥಿಬನ್, ಜಯರಾಂ ಗೊಂದಿ, ಡಿ. ಆನಂದ್, ವೆಂಕಟೇಶ್, ಎ.ಟಿ ರವಿ, ಗುಣಶೇಖರ್, ನಿರಂಜನಗೌಡ, ಉಮೇಶ್(ಜನ್ನಾಪುರ), ಪೇಪರ್ ಸುರೇಶ್, ವೈ.ಕೆ ಹನುಮಂತಯ್ಯ, ಎನ್. ರಾಮಕೃಷ್ಣ, ಗಿರಿನಾಯ್ಡು, ಮಲ್ಲೇಶ್, ಬಿ.ಜಿ ರಾಮಲಿಂಗಯ್ಯ, ಅಡವೀಶಯ್ಯ, ನರಸಿಂಹಚಾರ್, ರಾಜಶೇಖರ್ ಉಪ್ಪಾರ, ಆಟೋ ಲಕ್ಷ್ಮಣ್, ನಗರಸಭೆ, ಗ್ರಾಮ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಆಶಾ ಜ್ಯೋತಿ ಸ್ವಯಂ ಪ್ರೇರಿತ ರಕ್ತದಾನ ಕೇಂದ್ರದಿಂದ ದಾನಿಗಳಿಂದ ರಕ್ತ ಸಂಗ್ರಹಿಸಲಾಯಿತು. ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ವತಿಯಿಂದ ನೇತ್ರದಾನ ಶಿಬಿರ ನೆರವೇರಿತು. ಅಲ್ಲದೆ ನೇತ್ರದಾನ ಮಹತ್ವ ಕುರಿತು ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಲಾಯಿತು. ಜನ್ನಾಪುರ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಗಾಯನ ನುಡಿನಮನ ನಡೆಯಿತು.
ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ ಅಪ್ಪಾಜಿ ಕುಟುಂಬ ವರ್ಗದವರು ತಾಲೂಕಿನ ಗೋಣಿಬೀಡಿನಲ್ಲಿರುವ ಅಪ್ಪಾಜಿಯವರ ಸಮಾಧಿ ಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಭದ್ರಾವತಿ ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಬುಧವಾರ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ೬ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಹಾಗು ನೇತ್ರದಾನ ಶಿಬಿರದಲ್ಲಿ ಪಾಲ್ಗೊಂಡ ದಾನಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

.jpg)
.jpg)