ಸೆ.೧೦ರಂದು ಕಸಾಪದಿಂದ ದತ್ತಿ ಕಾರ್ಯಕ್ರಮ


ಭದ್ರಾವತಿ : ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಸೆ.೧೦ರ ಗುರುವಾರ ಸಂಜೆ ೫ ಗಂಟೆಗೆ ರೋಟರಿ ಕ್ಲಬ್ ಸಭಾಂಗಣದಲ್ಲಿ ದತ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಸುದೇವ ಭೂಪಾಳಂ ದತ್ತಿ ಹಾಗು ಶ್ರೀಮತಿ ಸರ್ವಮಂಗಳಮ್ಮ ಮತ್ತು ಶ್ರೀ ಶಿವಶಂಕರಯ್ಯ ದತ್ತಿ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ಎಂ ಸ್ವಾಮಿ ಉದ್ಘಾಟಿಸಲಿದ್ದು, ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಎಚ್. ತಿಮ್ಮಪ್ಪ ಅಧ್ಯಕ್ಷತೆವಹಿಸಲಿದ್ದಾರೆ.  
ವಸುದೇವ ಭೂಪಾಳಂರವರ ಸಾಹಿತ್ಯ ಅವಲೋಕನ ಕುರಿತು ಶಿವಮೊಗ್ಗ ಹಿರಿಯ ಸಾಹಿತಿ ಆರ್. ರತ್ನಯ್ಯ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಚನ ಗಾಯನ ನಡೆಯಲಿದೆ.  ದತ್ತಿ ದಾನಿಗಳಾದ ವಸುದೇವ ಭೂಪಾಳಂ ಮತ್ತು ಎಮರಿಟಸ್ ಪ್ರಾಧ್ಯಾಪಕಿ ಡಾ. ವಿಜಯಾದೇವಿ ಉಪಸ್ಥಿತರಿರುವರು.
ರೋಟರಿ ಕ್ಲಬ್ ಅಧ್ಯಕ್ಷ ನಿರಂಜನ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್ ರೇವಣಪ್ಪ, ಕರ್ನಾಟಕ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಸಾಪ ತಾಲೂಕು ಘಟಕದ ಅಧ್ಯಕ್ಷ ಎಚ್. ತಿಮ್ಮಪ್ಪ ಕೋರಿದ್ದಾರೆ.