ಕರಾಟೆ ಓಪನ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಹೊಸಮನೆ ಸರ್ಕಾರಿ ಶಾಲೆ ಮಕ್ಕಳಿಗೆ ಬಹುಮಾನ

ಉಚಿತ ತರಬೇತಿ ನೀಡಿ ಪ್ರೋತ್ಸಾಹಿಸುತ್ತಿರುವ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಶನ್


ಭದ್ರಾವತಿ : ನಗರದ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಶನ್ ಮಕ್ಕಳಿಗಾಗಿ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು, ನಗರಸಭೆ ವ್ಯಾಪ್ತಿಯ ಹೊಸಮನೆ ಸರ್ಕಾರಿ ಕನ್ನಡ ಶಾಲೆಯ ಸುಮಾರು 40 ಮಕ್ಕಳಿಗೆ ಉಚಿತವಾಗಿ ಕರಾಟೆ ತರಬೇತಿ ವ್ಯವಸ್ಥೆ ಕಲ್ಪಿಸಿಕೊಡುವ ಮೂಲಕ ಸರ್ಕಾರಿ ಶಾಲೆ ಮಕ್ಕಳು ಸಹ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವಲ್ಲಿ ನೆರವಾಗಿದೆ.
ಮಕ್ಕಳಲ್ಲಿ ಆತ್ಮವಿಶ್ವಾಸ, ಶಿಸ್ತು, ದೈಹಿಕ ಸಾಮರ್ಥ್ಯ ಹಾಗೂ ಆತ್ಮರಕ್ಷಣೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ತರಬೇತಿ ನೀಡಲಾಗಿದೆ. ಕರಾಟೆ ಶಿಕ್ಷಕರಾದ ಪ್ರೇಮ ಮತ್ತು ಮನೋಜ್ ಅವರು ಮಕ್ಕಳಿಗೆ ಕರಾಟೆ ತರಬೇತಿ ನೀಡಿದ್ದಾರೆ.
    ಕರಾಟೆ ತರಬೇತಿ ಪಡೆದ ಮಕ್ಕಳ ಪೈಕಿ 8 ಮಕ್ಕಳನ್ನು ಆಯ್ಕೆ ಮಾಡಿ ತರೀಕೆರೆಯಲ್ಲಿ ಆಯೋಜಿಸಲಾಗಿದ್ದ ಕರಾಟೆ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಮಕ್ಕಳು ಆತ್ಮವಿಶ್ವಾಸದಿಂದ ಸ್ಪರ್ಧೆಯಲ್ಲಿ ಭಾಗವಹಿಸಿ ಕಟಾ ಹಾಗೂ ಫೈಟ್ ವಿಭಾಗಗಳಲ್ಲಿ ಪ್ರಥಮ ಹಾಗೂ ತೃತೀಯ ಸ್ಥಾನಗಳನ್ನು ಪಡೆದು ಶಾಲೆಗೆ ಹಾಗೂ ನಗರಕ್ಕೆ ಕೀರ್ತಿ ತಂದಿದ್ದಾರೆ.
ಸರ್ಕಾರಿ ಶಾಲೆಯ ಮಕ್ಕಳಲ್ಲಿಯೂ ಅಪಾರ ಪ್ರತಿಭೆ, ಸಾಮರ್ಥ್ಯ ಮತ್ತು ಸಾಧಿಸುವ ಛಲವಿದೆ. ಅವರಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ಮತ್ತು ವೇದಿಕೆ ದೊರೆತರೆ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಸಾಧನೆ ಮಾಡಬಲ್ಲರು ಎಂಬುದಕ್ಕೆ ಈ ಮಕ್ಕಳು ಉತ್ತಮ ಉದಾಹರಣೆಯಾಗಿದ್ದಾರೆ.
    ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೊಲೀಸ್ ಉಪವಿಭಾಗದ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ರವರು ಮಕ್ಕಳೊಂದಿಗೆ ಸಂವಾದ ನಡೆಸಿ, ಕ್ರೀಡೆ ಹಾಗೂ ಆತ್ಮರಕ್ಷಣೆಯ ಮಹತ್ವವನ್ನು ತಿಳಿಸಿದರು.
ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಶನ್ ಸಂಸ್ಥಾಪಕ ಪ್ರಶಾಂತ್, ನಾಗರಾಜ್, ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಡಿ9-ಬಿಡಿವಿಟಿ
ಭದ್ರಾವತಿ ಹೊಸಮನೆ ಸರ್ಕಾರಿ ಶಾಲೆ ಮಕ್ಕಳು ತರೀಕೆರೆಯಲ್ಲಿ ಆಯೋಜಿಸಲಾಗಿದ್ದ ಕರಾಟೆ ಓಪನ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಮತ್ತು ತೃತೀಯ ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ.




Ananthakumara, Reporter, Kannadaprabha,
NDK/31A, Near, Sri Satyasayi Baba school,
Newtown, Bhadravathi:-577301(Tq)
Shimoga(Dis)
Mob: 9738801478
: 9482007466