ಅಂತರಗಂಗೆ ಗ್ರಾಮದಲ್ಲಿ "ಅಂಬೇಡ್ಕರ್ ಓದು" ಕಾರ್ಯಕ್ರಮ
ಭದ್ರಾವತಿ: ತಾಲೂಕಿನ ಅಂತರಗಂಗೆ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ವಿಭಾಗದ ಸಹಯೋಗದೊಂದಿಗೆ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಂವಿಧಾನ ಶಿಲ್ಪಿ "ಅಂಬೇಡ್ಕರ್ ಓದು" ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಭದ್ರಾವತಿ: ತಾಲೂಕಿನ ಅಂತರಗಂಗೆ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ವಿಭಾಗದ ಸಹಯೋಗದೊಂದಿಗೆ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಂವಿಧಾನ ಶಿಲ್ಪಿ "ಅಂಬೇಡ್ಕರ್ ಓದು" ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾಲೇಜಿನ ಸಿ.ಬಿ.ಸಿ ಅಧ್ಯಕ್ಷ ಗಂಗಾಧರ್ ಅಂಬೇಡ್ಜರ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಪ್ರಾಚಾರ್ಯ ಡಾ. ಸಾಸ್ವೇಹಳ್ಳಿ ಸತೀಶ್ ರವರು ಅಂಬೇಡ್ಕರ್ ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಚಾರ್ಯರಾದ ಎಂ. ಸತೀಶ್ ಹಾಗೂ ಸಿಬಿಸಿ ಸದಸ್ಯ ಗೋವಿಂದಚಾರ್ ರವರು ಭಾಗವಹಿಸಿದ್ದರು. ಕಾರ್ಯಕ್ರಮಕ್ಕೂ ಮೊದಲು ಅಂಬೇಡ್ಕರ್ ರವರ ಕುರಿತಾದ ಗೀತೆಗಳನ್ನು ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ಪ್ರಧಾನ ಕಾರ್ಯದರ್ಶಿ ತಮಟೆ ಜಗದೀಶ್ ಹಾಗೂ ತರಬೇತಿ ಪಡೆದ ವಿದ್ಯಾರ್ಥಿಗಳು ಹಾಡಿದರು.
ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಯಿತು ಹಾಗೂ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ಉಮೇಶ್ ಸ್ವಾಗತಿಸುವ ಮೂಲಕ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಇತಿಹಾಸ ಉಪನ್ಯಾಸಕಿ ಉಷಾ ನಿರೂಪಿಸಿದರು
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಕಾಲೇಜಿನ ಬೋಧಕ/ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಇಲಾಖೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
