ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಿಂದ ಸರ್.ಎಂ.ವಿ ಜನ್ಮದಿನಾಚರಣೆ
ಭದ್ರಾವತಿ ಕ್ಷೇತ್ರದ ಅನ್ನದಾತ, ಶ್ರೇಷ್ಠ ತಂತ್ರಜ್ಞಾನಿ, ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸಂಸ್ಥಾಪಕ ಅಧ್ಯಕ್ಷರಾದ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಅವರ ೧೬೬ನೇ ಜನ್ಮದಿನಾಚರಣೆ ನಗರದ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಿಂದ ಮಂಗಳವಾರ ಜನ್ನಾಪುರ ಶ್ರೀ ಮಲ್ಲೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಉಪನ್ಯಾಸ ನೀಡಿದ ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ; ಕ್ಷೇತ್ರದ ಅನ್ನದಾತ, ಶ್ರೇಷ್ಠ ತಂತ್ರಜ್ಞಾನಿ, ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸಂಸ್ಥಾಪಕ ಅಧ್ಯಕ್ಷರಾದ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಅವರ ೧೬೬ನೇ ಜನ್ಮದಿನಾಚರಣೆ ನಗರದ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಿಂದ ಮಂಗಳವಾರ ಜನ್ನಾಪುರ ಶ್ರೀ ಮಲ್ಲೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು.
ಸಂಘದ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ ಅಧ್ಯಕ್ಷತೆವಹಿಸಿದ್ದರು. ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಆಧುನಿಕ ಕರ್ನಾಟಕಕ್ಕೆ ಸರ್.ಎಂ ವಿಶ್ವೇಶ್ವರಾಯರ ಕೊಡುಗೆ ಕುರಿತು ಉಪನ್ಯಾಸ ನೀಡಿದರು. ವಿಶ್ವೇಶ್ವರಾಯ ಅವರ ತಾಂತ್ರಿಕ ಕೌಶಲ್ಯ, ಕರ್ತವ್ಯ ನಿಷ್ಠೆ, ಬದ್ಧತೆ, ಜೀವನ ಶೈಲಿ ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಬಿ. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎಸ್. ಅಡವೀಶಯ್ಯ, ಕಾರ್ಯದರ್ಶಿ ಬಿ.ಎನ್ ಶ್ರೀನಿವಾಸ್, ಖಂಜಾಚಿ ಕೆಂಪಯ್ಯ, ಸದಸ್ಯರಾದ ಜಿ.ಬಿ.ಕೆ ರವೀಂದ್ರರೆಡ್ಡಿ, ಚಂದ್ರಮೋಹನ್, ಎಸ್.ಈ ನಂಜುಂಡೇಗೌಡ, ರಾಮಪ್ಪ ವಿ. ಮುನೇನಕೊಪ್ಪ, ಎ. ಈಶ್ವರಪ್ಪ, ಎಸ್. ನರಸಿಂಹಚಾರ್, ರಾಜ, ಜಿ. ಶಂಕರ್, ಮಹೇಶ್ವರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಗಜೇಂದ್ರ ಪ್ರಾರ್ಥಿಸಿ, ಎಸ್.ಎಸ್ ಭೈರಪ್ಪ ನಿರೂಪಿಸಿದರು.
