ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪರಿಗೆ `ಶಿಕ್ಷಣ ಸೇವಾ ರತ್ನ' ಪ್ರಶಸ್ತಿ


ಭದ್ರಾವತಿ ತಾಲೂಕಿನ ಸುಲ್ತಾನಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪರವರಿಗೆ ಬೆಂಗಳೂರಿನ ಪ್ರೆಸ್ ಕ್ಲಬ್ ವತಿಯಿಂದ ಭಾನುವಾರ ೨೦೨೬ನೇ ಸಾಲಿನ ರಾಜ್ಯಮಟ್ಟದ `ಶಿಕ್ಷಣ ಸೇವಾ ರತ್ನ' ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

    ಭದ್ರಾವತಿ : ತಾಲೂಕಿನ ಸುಲ್ತಾನಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪರವರಿಗೆ ಬೆಂಗಳೂರಿನ ಪ್ರೆಸ್ ಕ್ಲಬ್ ವತಿಯಿಂದ ಭಾನುವಾರ ೨೦೨೬ನೇ ಸಾಲಿನ ರಾಜ್ಯಮಟ್ಟದ `ಶಿಕ್ಷಣ ಸೇವಾ ರತ್ನ' ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

    ಬೆಂಗಳೂರಿನ ಸರ್. ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್) ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿನ ಸೇವೆ, ಬೋಧನಾ ಕೌಶಲ್ಯ, ಮಾರ್ಗದರ್ಶನ, ಆಡಳಿತ ನಿರ್ವಹಣೆ, ವ್ಯವಸ್ಥೆಯ ಹೊಣೆಗಾರಿಕೆ ಹಾಗು ವಿದ್ಯಾರ್ಥಿಗಳ ಜವಾಬ್ದಾರಿಗಾಗಿ ಈ ಪ್ರಶಸ್ತಿಯನ್ನು ರೇವಣಪ್ಪರವರಿಗೆ ನೀಡಿ ಗೌರವಿಸಲಾಗಿದೆ. 

    ಪ್ರೆಸ್ ಕ್ಲಬ್ ರಾಜ್ಯಾಧ್ಯಕ್ಷ ಎಸ್. ರಾಮಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಸ್.ಜಿ ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಪ್ರಶಸ್ತಿ ಪುರಸ್ಕೃತ ರೇವಣಪ್ಪರವರನ್ನು ಶಾಲೆಯ ಶಿಕ್ಷಕ ಹಾಗು ಸಿಬ್ಬಂದಿ ವೃಂದದವರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ಸೇರಿದಂತೆ ನಗರದ ವಿವಿಧ ಸಂಘ-ಸಂಸ್ಥೆಗಳು, ತಾಲೂಕಿನ ಶಿಕ್ಷಕ ವೃಂದದವರು, ಗಣ್ಯರು ಅಭಿನಂದಿಸಿದ್ದಾರೆ.7466