ಮಹಿಳೆಯರಿಗೆ ಮೂರು ತಿಂಗಳ ಉಚಿತ ಹೊಲಿಗೆ ತರಬೇತಿಗೆ ಚಾಲನೆ


ಭದ್ರಾವತಿ ನಗರದ ಉಜ್ಜನಿಪುರ ಬೈಪಾಸ್ ರಸ್ತೆ, ಡಾನ್ ಬೋಸ್ಕೋ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಹಿಳೆಯರಿಗಾಗಿ ಮೂರು ತಿಂಗಳ ಉಚಿತ ಹೊಲಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಸಂಸ್ಥೆಯ ನಿರ್ದೇಶಕರಾದ ರೆವರೆಂಡ್ ಫಾದರ್ ಕ್ರಿಸ್ತುರಾಜ್ ಹೊಲಿಗೆ ತರಬೇತಿಗೆ ಚಾಲನೆ ನೀಡಿದರು.

    ಭದ್ರಾವತಿ: ನಗರದ ಉಜ್ಜನಿಪುರ ಬೈಪಾಸ್ ರಸ್ತೆ, ಡಾನ್ ಬೋಸ್ಕೋ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಹಿಳೆಯರಿಗಾಗಿ ಮೂರು ತಿಂಗಳ ಉಚಿತ ಹೊಲಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಸಂಸ್ಥೆಯ ನಿರ್ದೇಶಕರಾದ ರೆವರೆಂಡ್ ಫಾದರ್ ಕ್ರಿಸ್ತುರಾಜ್ ಹೊಲಿಗೆ ತರಬೇತಿಗೆ ಚಾಲನೆ ನೀಡಿದರು.

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಕೌಶಲ್ಯಾಭಿವೃದ್ಧಿ ಅತ್ಯಂತ ಅಗತ್ಯವಾಗಿದೆ. ತರಬೇತಿಯ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.

ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ಮತ್ತು ಫಿಲೋಮಿನಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಸ್ಥೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗು ಸಾರ್ವಜನಿಕರು ಉಪಸ್ಥಿತರಿದ್ದರು.

ಅಕ್ಷಯಶಕ್ತಿ ವೆಲ್ಫೇರ್ ಸೊಸೈಟಿ, ಮುಂಬೈ ಸಹಯೋಗದೊಂದಿಗೆ ಆರಂಭಿಸಲಾಗಿರುವ ಉಚಿತ ಹೊಲಿಗೆ ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಾಲಿನಿ ಪಾಲ್ಗೊಳ್ಳುವ ಮೂಲಕ ತರಬೇತಿ ನೀಡಲಿದ್ದಾರೆ.