ಸೆ.೮ರಂದು ವಿದ್ಯುತ್ ವ್ಯತ್ಯಯ


    ಭದ್ರಾವತಿ : ಮೆಸ್ಕಾಂ ನಗರ ಉಪವಿಭಾಗ ಘಟಕ-೨ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯಲ್ಲಿ ಸೆ.೮ರ ಮಂಗಳವಾರ ಬೆಳಿಗ್ಗೆ ೯.೩೦ ರಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ಮಾಧವಾಚಾರ್ ವೃತ್ತ, ಬಸವೇಶ್ವರ ವೃತ್ತ, ಎನ್‌ಎಸ್‌ಟಿ ರಸ್ತೆ, ಸಿ.ಎನ್ ರಸ್ತೆ, ರಂಗಪ್ಪ ವೃತ್ತ, ಮಾಧವ ನಗರ, ಗಾಂಧಿ ವೃತ್ತ, ಭೂತನಗುಡಿ, ಕೋಡಿಹಳ್ಳಿ, ಹೊಸ ಕೋಡಿಹಳ್ಳಿ, ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ರಸ್ತೆ, ಕೋಟೆ ಏರಿಯಾ, ಖಾಜಿ ಮೊಹಲ್ಲಾ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.