ವೇಳಾಂಗಣಿ ಆರೋಗ್ಯ ಮಾತೆ ವಾರ್ಷಿಕೋತ್ಸವ : ಭವ್ಯ ತೇರಿನ ಮೆರವಣಿಗೆ
ಭದ್ರಾವತಿ ಹಳೇನಗರ ವ್ಯಾಪ್ತಿಯ ಗಾಂಧಿನಗರದ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಭವ್ಯ ಅಲಂಕೃತ ತೇರಿನ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು.
ಭದ್ರಾವತಿ : ಹಳೇನಗರ ವ್ಯಾಪ್ತಿಯ ಗಾಂಧಿನಗರದ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಭವ್ಯ ಅಲಂಕೃತ ತೇರಿನ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು.
ತೀರ್ಥಹಳ್ಳಿ ಧರ್ಮ ಕೇಂದ್ರದ ಧರ್ಮಗುರುಗಳಾದ ಫಾದರ್ ವೀರೇಶ್ ಮೊರಾಸ್ ತೇರಿನ ಮೆರವಣಿಗೆಗೆ ಚಾಲನೆ ನೀಡಿದರು. ಗಾಂಧಿನಗರ, ಸಂತೆ ಮೈದಾನ ರಸ್ತೆ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ತರೀಕೆರೆ ರಸ್ತೆ, ಗಾಂಧಿವೃತ್ತ ಮಾರ್ಗವಾಗಿ ದೇವಾಲಯಕ್ಕೆ ಹಿಂದಿರುಗಲಾಯಿತು.
ಭಕ್ತರು ಮೇಣದಬತ್ತಿಗಳನ್ನು ಹಿಡಿದು ಪ್ರಾರ್ಥಿಸುತ್ತಾ ಮೆರವಣಿಗೆಯಲ್ಲಿ ಸಾಗಿಸಿದರು. ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದ ಧರ್ಮಗುರು ಫಾದರ್ ಸ್ಟೀವನ್ ಡೇಸಾ, ಧರ್ಮಭಗಿನಿಯರು, ಭಕ್ತಾಧಿಗಳು ಪಾಲ್ಗೊಂಡಿದ್ದರು.
