ಜಾನಪದ ಕಲೆಗಳನ್ನು ಮೈಗೊಡಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಿ : ಡಿ. ಮಂಜುನಾಥ್


 ಕರ್ನಾಟಕ ಜಾನಪದ ಪರಿಷತ್, ಬೆಂಗಳೂರು, ಭದ್ರಾವತಿ ತಾಲೂಕು ಶಾಖೆ ವತಿಯಿಂದ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಜಾನಪದ ದಿನಾಚರಣೆ ಉದ್ಯಮಿ ಬಿ.ಕೆ ಜಗನ್ನಾಥ್, ಡಿ. ಮಂಜುನಾಥ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು. 
    ಭದ್ರಾವತಿ: ಜಾನಪದ ಕಲೆಗಳನ್ನು ಮೈಗೂಡಿಸಿಕೊಳ್ಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಕಲೆ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಜಾನಪದ ಪರಿಷತ್ ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು. 
    ಅವರು ಶನಿವಾರ ಕರ್ನಾಟಕ ಜಾನಪದ ಪರಿಷತ್, ಬೆಂಗಳೂರು, ತಾಲೂಕು ಶಾಖೆ ವತಿಯಿಂದ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. 
    ಜಾನಪದ ಕಲೆಗಳು ತಮ್ಮದೇ ಆದ ವಿಶಿಷ್ಟತೆಯನ್ನು ಹೊಂದಿವೆ. ಪ್ರತಿಯೊಂದು ಕಲೆಗೂ ಅದರದೇ ಆದ ಮಹತ್ವವಿದೆ. ಇವುಗಳ ಕುರಿತು ಪ್ರತಿಯೊಬ್ಬರು ಸಮಗ್ರವಾಗಿ ಅಧ್ಯಯನ ನಡೆಸಿ ತಿಳಿದುಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಾನಪದ ಕಲೆಗಳ ಸಮಗ್ರ ಮಾಹಿತಿಯನ್ನು ಕರ್ನಾಟಕ ಜಾನಪದ ಪರಿಷತ್ ಸಂಗ್ರಹಿಸಿ ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದೆ. ಜಿಲ್ಲಾ ಮತ್ತು ತಾಲೂಕು ಶಾಖೆಗಳು ಈ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ನಿರಂತರವಾಗಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿವೆ. ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ ಎಂದರು. 
    ಕಾರ್ಯಕ್ರಮ ಉದ್ಘಾಟಿಸಿದ ಉದ್ಯಮಿ ಬಿ.ಕೆ ಜಗನ್ನಾಥ್ ಮಾತನಾಡಿ, ಜಾನಪದ ಕಲೆಗಳ ಮಹತ್ವ ಇಂದಿನ ಪೀಳಿಗೆಯವರು ಅರಿತುಕೊಂಡು ಅವುಗಳನ್ನು ಮೈಗೂಡಿಸಿಕೊಳ್ಳಬೇಕು. ಆಗ ಮಾತ್ರ ಈ ರೀತಿಯ ಕಾರ್ಯಕ್ರಮಗಳು ಸಾರ್ಥಕಗೊಳ್ಳುತ್ತವೆ ಎಂದರು. 

 ಕರ್ನಾಟಕ ಜಾನಪದ ಪರಿಷತ್, ಬೆಂಗಳೂರು, ಭದ್ರಾವತಿ ತಾಲೂಕು ಶಾಖೆ ವತಿಯಿಂದ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದ ರಂಗರಾಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ. ರವಿ ಜಾನಪದ ಕಲೆ ಹಾಗು ಅವುಗಳ ಮಹತ್ವ ವಿವರಿಸಿದರು. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಚ್. ತಿಮ್ಮಪ್ಪ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಜಾನಪದ ಕಲಾವಿದ ರಂಗರಾಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಜಾನಪದ ಗೀತೆಗಳ ಗಾಯನ ಸ್ಪರ್ಧೆಯಲ್ಲಿ ಸುಮಾರು ೨೦ ತಂಡಗಳು ಭಾಗವಹಿಸಿದ್ದವು. ಸಂಗೀತ ಶಿಕ್ಷಕಿ ಅನಿತಾ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು. 
    ಜಾನಪದ ಪರಿಷತ್ ತಾಲೂಕು ಶಾಖೆ ಅಧ್ಯಕ್ಷ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ಅಧ್ಯಕ್ಷತೆವಹಿಸಿದ್ದರು.  ಹರೀಶ್ ಮತ್ತು ದಿವಾಕರ್ ಪ್ರಾರ್ಥಿಸಿದರು. ಕಮಲಾಕರ  ಸ್ವಾಗತಿಸಿ, ಬಿ.ಎಲ್ ಮೋಹನ್ ನಿರೂಪಿಸಿದರು.