ಫಿಲ್ಟರ್ ಶೆಡ್‌ನಲ್ಲಿ ಅಕ್ರಮ ಜಾಗ ನೋಂದಣಿ : ನ್ಯಾಯ ಒದಗಿಸಿಕೊಡುವ ಭರವಸೆ
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ
ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಫಿಲ್ಟರ್ ಶೆಡ್‌ಗೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ಸೋಮವಾರ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ಫಿಲ್ಟರ್ ಶೆಡ್‌ಗೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ಸೋಮವಾರ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಅಕ್ರಮ ಜಾಗ ನೋಂದಣಿಗೆ ಸಂಬಂಧಿಸಿದಂತೆ ಸ್ಥಳೀಯರು ಹಾಗು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಹಳ ವರ್ಷಗಳಿಂದ ಅಕ್ರಮ ಜಾಗಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಶಾರದ ಅಪ್ಪಾಜಿಯವರು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.
ಜೆಡಿಎಸ್ ಪಕ್ಷದ ತಾಲೂಕು ಘಟಕದ ಕಾರ್ಯಾಧ್ಯಕ್ಷ ಉಮೇಶ್, ಪ್ರಚಾರ ಸಮಿತಿ ಅಧ್ಯಕ್ಷ ಮಧುಸೂದನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
