ಸೆ.೭ರಂದು ವಿದ್ಯುತ್ ವ್ಯತ್ಯಯ
ಭದ್ರಾವತಿ : ಮೆಸ್ಕಾಂ ಶಿವಮೊಗ್ಗ ೨೨೦ ಕೆವಿ ಎಮ್.ಆರ್.ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ತಾಲೂಕಿನಲ್ಲಿ ಸಂಪರ್ಕಗೊಂಡಿರುವ ೧೧೦ ಕೆವಿ ೩ ಮಾರ್ಗ ಮತ್ತು ಬೇ ಯ ತ್ರೈಮಾಸಿಕ ನಿರ್ವಹಣೆಯನ್ನು ಹಮ್ಮಿಕೊಂಡಿರುವ ಸಂಬಂಧ ವಿದ್ಯುತ್ ಮಾರ್ಗ ಮುಕ್ತತೆ ಪಡೆಯಲಾಗುವುದರಿಂದ ಜೆ.ಪಿ.ಎಸ್ ಕಾಲೋನಿ ೧೧೦/೩೩//೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ಮತ್ತು ೧೧೦/೧೧ ಕೆವಿ ಮಾಚೇನಹಳ್ಳಿ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಸೆ.೭ರ ಸೋಮವಾರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನಗರ ಮತ್ತು ಗ್ರಾಮೀಣ ಉಪವಿಭಾಗ ವ್ಯಾಪ್ತಿಗೆ ಒಳಪಡುವ ನ್ಯೂಟೌನ್, ನ್ಯೂ ಕಾಲೋನಿ, ವಿದ್ಯಾಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆ ಶೆಟ್ಟಿ ಬಡಾವಣಿ, ಎನ್‌ಟಿಬಿ ಬಡಾವಣೆ, ಸರ್.ಎಂ.ವಿ ಬಡಾವಣೆ, ಹಳೇಸಿದ್ದಾಪುರ, ಹೊಸೂರು, ತಾಂಡ್ಯ, ಸಂಕ್ಲೀಪುರ, ಹುತ್ತಾ ಕಾಲೋನಿ, ಐ.ಟಿ.ಐ, ಜನ್ನಾಪುರ, ಬಿ.ಎಚ್ ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ. ಹಿರಿಯೂರು, ಹೊಸ ನಂಜಾಪುರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಿಕಿ ತಾಂಡ, ಹೊಳೆ ಗಂಗೂರು, ಲಕ್ಷ್ಮೀಸಾಗರ(ರಬ್ಬರ್ ಕಾಡು), ಸುಲ್ತಾನ ಮಟ್ಟಿ, ಕಾರೇಹಳ್ಳಿ, ಬಾಳೆ ಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ. ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಹಾಗಲಮನೆ, ಯರೇಹಳ್ಳಿ, ಮಾವಿನಕೆರೆ, ದೊಡ್ಡರಿ, ಮಜ್ಜಿಗೇನಹಳ್ಳಿ, ಪದ್ಮೇನಹಳ್ಳಿ, ಲಕ್ಷ್ಮಿಪುರ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರ ಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕೆಂಚೇನಳ್ಳಿ, ಗಂಗೂರು, ಬಿಸಿಲುಮನೆ, ದೇವನರಸೀಪುರ, ಶಿವಪುರ, ಅಡ್ಲಘಟ್ಟ, ಅರಳಿಕೊಪ್ಪ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಜೇಡಿಕಟ್ಟಿ, ಹಳೆ ಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ ಕೈಗಾರಿಕಾ ಪ್ರದೇಶ, ಹೊನ್ನವಿಲೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳಿ ಗ್ರಾ.ಪಂ. ವ್ಯಾಪ್ತಿ, ಶಿವರಾಮನಗರ, ವಿಶ್ವೇಶ್ವರಯ್ಯನಗರ, ಜೇಡಿಕಟ್ಟೆ ಹೊಸೂರು, ಜಯಂತಿ ಗ್ರಾಮ, ವೀರಾಪುರ, ಹುಲಿ ರಾಮನಕೊಪ್ಪ, ಹಾಗಲಮನೆ, ಸಂಕ್ಲಿಪುರ, ಸಿರಿಯೂರು, ಸಿರಿಯೂರು ತಾಂಡ್ಯ, ಸಿರಿಯೂರು ಕ್ಯಾಂಪ್, ವೀರಾಪುರ, ಮತಿಘಟ್ಟ, ಹಾತಿಕಟ್ಟಿ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.
