ಮೂವರು ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ




ಎಂ.ಟಿ ಲಕ್ಷ್ಮೀಶ (ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ)
    ಭದ್ರಾವತಿ : ತಾಲೂಕಿನ ಎಲ್. ಉಮಾದೇವಿ, ಎಂ.ಟಿ ಲಕ್ಷ್ಮೀಶ ಮತ್ತು ಡಿ.ಆರ್ ರಂಗರಾಜು ಸೇರಿದಂತೆ ೩ ಶಿಕ್ಷಕರಿಗೆ ಈ ಬಾರಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ಶಿಕ್ಷಕ ವರ್ಗದಲ್ಲಿ ಸಂತಸವನ್ನುಂಟು ಮಾಡಿದೆ. 
ಎಂ.ಟಿ ಲಕ್ಷ್ಮೀಶ : ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
    ನಗರಸಭೆ ವ್ಯಾಪ್ತಿಯ ಹೊಸ ಸಿದ್ದಾಪುರ(ಜಯಶ್ರೀ ಸರ್ಕಲ್ ಕ್ಲಸ್ಟರ್) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಟಿ ಲಕ್ಷ್ಮೀಶ ಅವರಿಗೆ ಈ ಬಾರಿ ಹಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. 
    ಧಾರವಾಡದಲ್ಲಿ ೨೦೧೬ರಲ್ಲಿ ವೃತ್ತಿ ಆರಂಭಿಸಿದ ಇವರು ನಂತರ ತಾಲೂಕಿನ ಬಿಳಿಕಿ ತಾಂಡ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಕಳೆದ ೨ ವರ್ಷಗಳಿಂದ ಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ವೃತ್ತಿ ನಿರ್ವಹಿಸುತ್ತಿದ್ದಾರೆ. ಇವರ ವೃತ್ತಿಯಲ್ಲಿನ ಹಲವು ಸಾಧನೆಗಳನ್ನು ಪರಿಗಣಿಸಿ ಈ ಬಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 
    ಸೆ.೫ರ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಇವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಲಕ್ಷ್ಮೀಶ ಅವರನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸತೀಶ್ ಗೌಡ ಹಾಗು ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು ಅಭಿನಂದಿಸಿದ್ದಾರೆ. 
    ಇದೆ ಶಾಲೆಯ ಮತ್ತೊಬ್ಬ ಶಿಕ್ಷಕ ಗಿರಿಧರ್ ಅವರಿಗೆ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ಒಂದೇ ಶಾಲೆಯ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ ಲಭಿಸಿರುವುದು ಶಿಕ್ಷಕ ವಲಯದಲ್ಲಿ ಸಂತಸವನ್ನುಂಟು ಮಾಡಿದೆ. 


ಡಿ.ಆರ್ ರಂಗರಾಜ್(ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ)
     ಡಿ.ಆರ್ ರಂಗರಾಜ್ : ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
    ತಾಲೂಕಿನ ಗ್ರಾಮೀಣ ಭಾಗದ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆ(ಕರ್ನಾಟಕ ಪಬ್ಲಿಕ್ ಶಾಲೆ)ಯ ಸಹ ಶಿಕ್ಷಕ ಡಿ.ಆರ್ ರಂಗರಾಜ್ ಅವರಿಗೆ ಈ ಬಾರಿ ಪ್ರೌಢಶಾಲೆ ವಿಭಾಗದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. 
    ಕಳೆದ ೨೩ ವರ್ಷಗಳಿಂದ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಂಗರಾಜ್ ಅವರು ರಂಗಭೂಮಿ ಕಲಾವಿದರು ಸಹ ಆಗಿದ್ದು, ಇವರ ವೃತ್ತಿಯಲ್ಲಿನ ಹಲವು ಸಾಧನೆಗಳನ್ನು ಪರಿಗಣಿಸಿ ಈ ಬಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 
    ರಂಗರಾಜ್ ಅವರನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಪ್ರಭಾರ ಮುಖ್ಯಶಿಕ್ಷಕ ದಿವಾಕರ್ ಹಾಗು ಶಿಕ್ಷಕ ಹಾಗು ಸಿಬ್ಬಂದಿ ವೃಂದದವರು, ಅರಳಿಹಳ್ಳಿ ಭಾಗದ ಜನಪ್ರತಿನಿಧಿಗಳು, ಗ್ರಾಮಸ್ಥರು ಅಭಿನಂದಿಸಿದ್ದಾರೆ.