ಸೆ.೯ರಂದು ವಿದ್ಯುತ್ ವ್ಯತ್ಯಯ
ಭದ್ರಾವತಿ: ಮೆಸ್ಕಾಂ ನಗರ ಉಪವಿಭಾಗ ಘಟಕ-೪ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಸೆ.೯ರ ಬುಧವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸೀಗೇಬಾಗಿ, ಹಳೇ ಸೀಗೇಬಾಗಿ, ಭದ್ರಾ ಕಾಲೋನಿ, ಸತ್ಯಸಾಯಿ ನಗರ, ಸೈಯ್ಯದ್ ಕಾಲೋನಿ, ಕಣಕಟ್ಟೆ, ವೀರಾಪುರ, ರಾಮನಗರ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
