ಯಾವುದೇ ಹಬ್ಬವಿರಲಿ ಒಗ್ಗಟ್ಟಾಗಿ ಸೌಹಾರ್ದಯುತವಾಗಿ ಆಚರಿಸಿ
ನಾಗರೀಕರ ಸೌಹಾರ್ದ ಸಭೆಯಲ್ಲಿ ಮುಖಂಡರ ಅಭಿಪ್ರಾಯ
ಭದ್ರಾವತಿ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪೊಲೀಸ್ ಉಪವಿಭಾಗದಿಂದ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ನಾಗರೀಕರ ಸೌಹಾರ್ದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ: ಹಬ್ಬ ಎಂದರೆ ಎಲ್ಲರೂ ಒಗ್ಗಟ್ಟಾಗಿ ಸೌಹಾರ್ದಯುತವಾಗಿ ಆಚರಿಸಬೇಕು. ಹಬ್ಬದ ಸಂದರ್ಭದಲ್ಲಿ ಅತಿರೇಕ, ದುವರ್ತನೆಯಿಂದ ನಡೆದುಕೊಳ್ಳದೆ ಮಾನವೀಯ ಸಂಬಂಧಗಳನ್ನು ಗೌರವಿಸುವಂತವರಾಗಬೇಕೆಂದು ನಗರದ ವಿವಿಧ ಸಂಘ-ಸಂಸ್ಥೆಗಳ, ಸರ್ವಧರ್ಮಗಳ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.
ಗುರುವಾರ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪೊಲೀಸ್ ಉಪವಿಭಾಗದಿಂದ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ನಾಗರೀಕರ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಮುಖಂಡರಾದ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ, ನಗರಸಭೆ ಹಿರಿಯ ಸದಸ್ಯ ವಿ. ಕದಿರೇಶ್, ಅಂಜುಮನ್ ಇಸ್ಲಾವುಲ್ ಮುಸ್ಲಿಮೀನ್ ಅಧ್ಯಕ್ಷ ಅಯೂಬ್ ಖಾನ್, ನಗರಸಭೆ ಮಾಜಿ ಉಪಾಧ್ಯಕ್ಷ ಚನ್ನಪ್ಪ, ಮಾಜಿ ಸದಸ್ಯ ದಿಲ್‌ದಾರ್, ಹಿಂದೂ ಜಾಗೃತಿ ವೇದಿಕೆ ಅರಳಿಹಳ್ಳಿ ದೇವರಾಜ್, ಪೋಕಸ್ ಮಂಜುನಾಥ್, ನಗರಸಭೆ ಮಾಜಿ ಅಧ್ಯಕ್ಷೆ ಲತಾ ಚಂದ್ರಶೇಖರ್, ಹೆಬ್ಬಂಡಿ ನಾಗರಾಜ್ ಸೇರಿದಂತೆ ಇನ್ನಿತರರು ಮಾತನಾಡಿ, ಯಾವುದೇ ಹಬ್ಬವಿರಲಿ ಎಲ್ಲರೂ ಸಡಗರ ಸಂಭ್ರಮದಿಂದ ಆಚರಿಸಬೇಕು. ಪ್ರೀತಿ, ಸೌಹಾರ್ದ ಬಹಳ ಮುಖ್ಯವಾಗಿದೆ. ಇನ್ನೊಬ್ಬರಿಗೆ ನೋವುಂಟು ಮಾಡಿ ಹಬ್ಬ ಆಚರಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಪ್ರತಿಯೊಂದು ಹಬ್ಬಕ್ಕೂ ತನ್ನದೇ ಆದ ಮಹತ್ವವಿರುತ್ತದೆ. ಇದನ್ನು ಪ್ರತಿಯೊಬ್ಬರು ಅರ್ಥಮಾಡಿಕೊಂಡು ಹಬ್ಬದ ಮಹತ್ವ ತಿಳಿಸುವಂತವರಾಗಬೇಕೆಂದರು.
ಭದ್ರಾವತಿ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪೊಲೀಸ್ ಉಪವಿಭಾಗದಿಂದ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ನಾಗರೀಕರ ಸೌಹಾರ್ದ ಸಭೆಯಲ್ಲಿ ಆಯೋಜಿಸಲಾಗಿತ್ತು.
ನಗರದಲ್ಲಿ ಹಿಂದೂ-ಮುಸ್ಲಿಮರು ಸೇರಿದಂತೆ ಎಲ್ಲಾ ಧರ್ಮದವರು ಯಾವುದೇ ಹಬ್ಬವಿರಲಿ ಸೌಹಾರ್ದತೆಯಿಂದ ಆಚರಿಸಿಕೊಂಡು ಬರುತ್ತಿದ್ದೇವೆ. ಈ ಬಾರಿ ಸಹ ಗೌರಿ ಗಣೇಶ ಹಬ್ಬ ನಗರದಲ್ಲಿ ಯಶಸ್ವಿಯಾಗಿ ನಡೆಯಲಿದ್ದು, ಯಾರು ಸಹ ಅನಗತ್ಯ ಗೊಂದಲಗಳಿಗೆ ಎಡೆಮಾಡಿಕೊಡದೆ ಶಾಂತಿ ಸೌಹಾರ್ದತೆ ಕಾಯ್ದುಕೊಳ್ಳಬೇಕೆಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಸಭೆಯ ನೇತೃತ್ವವಹಿಸಿದ್ದರು. ಸರ್ವಧರ್ಮಗಳ ಮುಖಂಡರು ಬಿ.ನಿಖಿಲ್ ಅವರನ್ನು ಸೌಹಾರ್ದಯುತವಾಗಿ ಸನ್ಮಾನಿಸಿ ಗೌರವಿಸಿದರು. ಇದೆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್ ಅವರಿಗೆ ಶಾಲು ಹೊದಿಸಿ ಗೌರವಿಸಿದರು.
ತಹಸೀಲ್ದಾರ್ ಗ್ರೇಡ್-೨ ಸುರೇಶ್, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ವಲಯ ಅರಣ್ಯಾಧಿಕಾರಿ ಕೆ.ಆರ್ ರಾಜೇಶ್, ಅಗ್ನಿಶಾಮಕ ಠಾಣಾಧಿಕಾರಿ ಆನಂದ್, ಪೊಲೀಸ್ ವೃತ್ತ ನಿರೀಕ್ಷಕರಾದ ಕೆ. ನಾಗಮ್ಮ, ಚಿದಾನಂದ ಉಪಸ್ಥಿತರಿದ್ದರು.
ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಸ್ವಾಗತಿಸಿದರು. ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಮುಖಂಡರು, ಜನಪ್ರತಿನಿಧಿಗಳು, ಗಣ್ಯರು, ವಿವಿಧ ಠಾಣೆಗಳ ಠಾಣಾ ನಿರೀಕ್ಷಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
.jpg=s320)
