ಭದ್ರಾವತಿ ಆಕಾಶ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾಗಿ ನಂದನ್ ಕುಮಾರ್ ಅಧಿಕಾರ ಸ್ವೀಕಾರ



ಭದ್ರಾವತಿ ನಗರದ ಜೆಪಿಎಸ್ ಕಾಲೋನಿ, ಭದ್ರಾವತಿ ಆಕಾಶವಾಣಿ ಕೇಂದ್ರದ ನೂತನ ಕಾರ್ಯಕ್ರಮ ಮುಖ್ಯಸ್ಥರಾಗಿ ಎಲ್.ಓ ನಂದನ್ ಕುಮಾರ್ ಅಧಿಕಾರ ಸ್ವೀಕರಿಸಿದರು.

    ಭದ್ರಾವತಿ: ನಗರದ ಜೆಪಿಎಸ್ ಕಾಲೋನಿ, ಭದ್ರಾವತಿ ಆಕಾಶವಾಣಿ ಕೇಂದ್ರದ ನೂತನ ಕಾರ್ಯಕ್ರಮ ಮುಖ್ಯಸ್ಥರಾಗಿ ಎಲ್.ಓ ನಂದನ್ ಕುಮಾರ್ ಅಧಿಕಾರ ಸ್ವೀಕರಿಸಿದರು.

    ಬೆಂಗಳೂರು ಆಕಾಶವಾಣಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಂದನ್ ಕುಮಾರ್‌ರವರು ಹೊಸ ಹೊಸ  ವಿನೂತನ ಕಾರ್ಯಕ್ರಮಗಳೊಂದಿಗೆ ಭದ್ರಾವತಿ ಆಕಾಶವಾಣಿ ಕೇಂದ್ರ ಮತ್ತಷ್ಟು ಕೇಳುಗರ ಮನೆಮತಾಗುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವ ವಿಶ್ವಾಸ ಆಕಾಶವಾಣಿ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಗಳು ಹಾಗು ಉದ್ಘೋಷಕರು ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಕಾರ್ಯಕ್ರಮ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್. ಆರ್ ಭಟ್ ರವರು ಬೆಂಗಳೂರು ಆಕಾಶವಾಣಿ ಕೇಂದ್ರಕ್ಕೆ ವರ್ಗಾವಣೆಯಾಗಿದ್ದಾರೆ.

    ನೂತನ ಕಾರ್ಯಕ್ರಮ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ನಂದನ್ ಕುಮಾರ್‌ರವರನ್ನು ಹಿರಿಯ ಉದ್ಘೋಷಕ ಸುಬ್ರಹ್ಮಣ್ಯ ಶರ್ಮಾ, ವಿದ್ಯಾದೇವಿ, ಪ್ರತಿಮಾ, ಮೀನಾ, ಪ್ರೇಮಲತಾ, ಗಣೇಶ್, ನಂದಿನಿ ಸೇರಿದಂತೆ ಇನ್ನಿತರರು ಅಭಿನಂದಿಸಿದರು.