ಚುಂಚಾದ್ರಿ ಮಹಿಳಾ ವೇದಿಕೆಯಿಂದ ಹಳೇ ಸಿದ್ದಾಪುರ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ
ಚುಂಚಾದ್ರಿ ಮಹಿಳಾ ವೇದಿಕೆಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನೋತ್ಸವ ಭದ್ರಾವತಿ ನಗರಸಭೆ ವ್ಯಾಪ್ತಿಯ ಹಳೇ ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು.
ಭದ್ರಾವತಿ : ಚುಂಚಾದ್ರಿ ಮಹಿಳಾ ವೇದಿಕೆಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನೋತ್ಸವ ನಗರಸಭೆ ವ್ಯಾಪ್ತಿಯ ಹಳೇ ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು.
ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಮಾತನಾಡಿ, ಮಹಾತ್ಮಗಾಂಧಿ ಅವರು ದೇಶದಲ್ಲಿನ ಎಲ್ಲಾ ಧರ್ಮ, ಜಾತಿ, ಜನಾಂಗದವರನ್ನು ಪ್ರೀತಿಯಿಂದ ಕಾಣುವ ಜೊತೆಗೆ ಎಲ್ಲರನ್ನು ಒಗ್ಗೂಡಿಸಿ ಜಾತ್ಯಾತೀತ ದೇಶ ನಿರ್ಮಾಣಕ್ಕೆ ಪಣ ತೊಡಿದ್ದರು. ಅಲ್ಲದೆ ದೇಶದ ಸ್ವಾತಂತ್ರ್ಯಕ್ಕಾಗಿ ಆಹಿಂಸಾ ಮಾರ್ಗದ ಮೂಲಕ ಹೋರಾಟ ನಡೆಸಿ ಸ್ವಾತಂತ್ರ್ಯ ಗಳಿಸಿಕೊಟ್ಟಿದ್ದರು. ಇವರ ಆದರ್ಶಗಳು ಪ್ರತಿಯೊಬ್ಬರಿಗೂ ದಾರಿದೀಪವಾಗಿದೆ ಎಂದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಸರಸ್ವತಿ ಹಾಗೂ ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರು, ಶಾಲಾಭಿವೃದ್ಧಿ ಸಮಿತಿ ಸದಸ್ಯ ಶೇಖರ್ ಕಲ್ಲಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನೋತ್ಸವ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೇದಿಕೆ ಸಹಕಾರ್ಯದರ್ಶಿ ಶೀಲಾ ರವಿ, ಖಜಾಂಚಿ ಭಾರತಿ ಕುಮಾರ್ ನಿರ್ದೇಶಕರಾದ ಕುಸುಮ, ಸುಧಾ, ಮಂಜುಳಾ ಹಾಗು ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮತ್ತು ಶಾಲೆಯ ಮಕ್ಕಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಸಿಹಿ ಹಂಚುವ ಮೂಲಕ ಜನ್ಮದಿನೋತ್ಸವ ಸಂಭ್ರಮ ಹಂಚಿಕೊಳ್ಳಲಾಯಿತು.
