ನಾಡಹಬ್ಬ ದಸರಾ ಆಚರಣೆ ಯಶಸ್ವಿಗೆ ಪ್ರತಿಯೊಬ್ಬರು ಕೈಜೋಡಿಸಿ ಹಬ್ಬದ ಮೆರಗು ಹೆಚ್ಚಿಸಿ : ಆಶಾಲತಾ
ಮಹಿಳೆರಿಗಾಗಿ ಬಂಟರ ಭವನದಲ್ಲಿ ಆಯೋಜಿಸಲಾಗಿದ್ದ ಇಂಧನ ರಹಿತ ಅಡುಗೆ ಸ್ಪರ್ಧೆ ಕಾರ್ಯಕ್ರಮ
ಭದ್ರಾವತಿಯಲ್ಲಿ ನಾಡಹಬ್ಬ ದಸರಾ ಆಚರಣೆ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ನ್ಯೂಟೌನ್ ಬಂಟರ ಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಇಂಧನ ರಹಿತ ಅಡುಗೆ ಸ್ಪರ್ಧೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಶಾಲತಾ ಉದ್ಘಾಟಿಸಿದರು.
ಭದ್ರಾವತಿ : ನಾಡಹಬ್ಬ ದಸರಾ ಆಚರಣೆ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ನ್ಯೂಟೌನ್ ಬಂಟರ ಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಇಂಧನ ರಹಿತ ಅಡುಗೆ ಸ್ಪರ್ಧೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಶಾಲತಾ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ನಾಡಹಬ್ಬ ದಸರಾ ದೇಶಾದ್ಯಂತ ವಿಭಿನ್ನ ರೀತಿಯಲ್ಲಿ ಆಚರಿಸಲಾಗುತ್ತದೆ. ರಾಜ್ಯದಲ್ಲಿ ವಿಶೇಷವಾಗಿ ಮೈಸೂರು ರಾಜರು ಶ್ರೀ ಚಾಮುಂಡೇಶ್ವರಿ ದೇವಿಯನ್ನು ಆರಾಧಿಸಲು ಪ್ರಜೆಗಳೊಂದಿಗೆ ಜಾರಿಗೆ ತಂದ ದಸರಾ ಆಚರಣೆ ಸ್ವಾತಂತ್ರ್ಯ ನಂತರವೂ ನಮ್ಮ ರಾಜ್ಯದ ನಾಡಹಬ್ಬವಾಗಿ ಆಚರಿಸುತ್ತಿದ್ದೇವೆ. ದಸರಾ ನಾಡಹಬ್ಬ ಆಚರಣೆಯ ಕಾರ್ಯಕ್ರಮಗಳಲ್ಲಿ ನಾವೆಲ್ಲರೂ ಪಾಲ್ಗೊಳ್ಳುವ ಜೊತೆಗೆ ಯಶಸ್ವಿಗೆ ಕೈಜೋಡಿಸಬೇಕಾಗಿದೆ. ಅಲ್ಲದೆ ಹಬ್ಬದ ಮೆರಗು ಮತ್ತಷ್ಟು ಹೆಚ್ಚಿಸಬೇಕಾಗಿದೆ ಎಂದರು.
ಪೌರಾಯುಕ್ತ ಕೆ.ಎನ್ ಹೇಮಂತ್ ಮಾತನಾಡಿ, ನಾಡಹಬ್ಬ ದಸರಾ ಆಚರಣೆಯಲ್ಲಿ ಮಹಿಳೆಯರಿಗೂ ಸಮಾನ ಅವಕಾಶಗಳನ್ನು ನೀಡಬೇಕೆಂಬ ಪರಿಕಲ್ಪನೆಗಳ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಿಕೊಂಡು ಬರಲಾಗುತ್ತಿದೆ. ಮಹಿಳೆಯರಿಗಾಗಿ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ನಗರದ ಎಲ್ಲಾ ಮಹಿಳೆಯರು ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಾಗಬೇಕೆಂದರು.
ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆವಹಿಸಿದ್ದರು. ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಸ್ವಾಗತಿಸಿ, ಮಹಮದ್ ಗೌಸ್ ಕಾರ್ಯಕ್ರಮ ನಿರೂಪಿಸಿದರು.
