ಅಹಿಂಸಾ ಮಾರ್ಗದಲ್ಲಿ ಸಾಗಿದರೆ ಏನಾದರೂ ಸಾಧಿಸಲು ಸಾಧ್ಯ : ಗೀತಾ ರಾಜಕುಮಾರ್


ಭದ್ರಾವತಿ ನಗರಸಭೆ ಕಚೇರಿ ಆವರಣದಲ್ಲಿ ಶುಕ್ರವಾರ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ದೇಶದ ಎರಡನೇ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಭದ್ರಾವತಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅಹಿಂಸಾ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವ ಜೊತೆಗೆ ಅಹಿಂಸಾ ಮಾರ್ಗದಲ್ಲಿ ಮುನ್ನಡೆದರೇ ಏನಾದರೂ ಸಾಧಿಸಬಹುದು ಎಂಬುದನ್ನು ಮಾನವ ಕುಲಕ್ಕೆ ತೋರಿಸಿ ಕೊಟ್ಟಿದ್ದಾರೆ. ಪ್ರತಿದಿನ ಇಂತಹ ಮಹಾತ್ಮರ ಸ್ಮರಣೆ ನಮ್ಮದಾಗಬೇಕೆಂದು ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಕರೆ ನೀಡಿದರು.

    ಅವರು ನಗರಸಭೆ ಕಚೇರಿ ಆವರಣದಲ್ಲಿ ಶುಕ್ರವಾರ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ದೇಶದ ಎರಡನೇ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಅಂಗವಾಗಿ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

    ಮಹಾತ್ಮಾ ಗಾಂಧೀಜಿ, ಪಂಡಿತ್ ಜವಾಹರಲಾಲ್ ನೆಹರೂ, ಲಾಲ್ ಬಹದ್ದೂರು ಶಾಸ್ತ್ರಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಸೇರಿದಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅನೇಕ ಮಹನೀಯರನ್ನು ಸದಾಕಾಲ ಸ್ಮರಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯವಾಗಿದೆ ಎಂದರು.

    ಪೌರಾಯುಕ್ತ ಕೆ.ಎನ್ ಹೇಮಂತ್, ನಗರಸಭೆ  ಸದಸ್ಯ ಚನ್ನಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕಂದಾಯಾಧಿಕಾರಿ ರಮೇಶ್, ಸಮುದಾಯ ಸಂಘಟನಾಧಿಕಾರಿ ಸುಹಾಸಿನಿ, ಅಧಿಕಾರಿಗಳಾದ ಆಶಾಲತಾ, ಓಂಕಾರಪ್ಪ, ಪೌರ ಕಾರ್ಮಿಕರ ಸೇವಾ ಸಂಘದ ಅಧ್ಯಕ್ಷ ಚೇತನ್‌ಕುಮಾರ್, ನರಸಿಂಹಮೂರ್ತಿ, ರಾಜಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.