ಗಾಂಧಿ-ಶಾಸ್ತ್ರಿ ಜಯಂತಿ : ಬಡ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ನೆರವು
ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗು ಮಾಜಿ ಪ್ರಧಾನಿ ಲಾಲ್ ಬಹದ್ದೂರು ಶಾಸ್ತ್ರಿಯವರ ಜನ್ಮದಿನಾಚರಣೆ ಅಂಗವಾಗಿ ಭದ್ರಾವತಿ ತಾಲೂಕಿನ ಬಿಆರ್‌ಪಿ ಲಯನ್ಸ್ ಕ್ಲಬ್ ಲೇಕ್ ಸಿಟಿವತಿಯಿಂದ ಬಡ ವಿದ್ಯಾರ್ಥಿನಿಯವರು ಉನ್ನತ ಶಿಕ್ಷಣ ಪಡೆಯಲು ಆರ್ಥಿಕವಾಗಿ ನೆರವು ನೀಡಲಾಯಿತು.
ಭದ್ರಾವತಿ: ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗು ಮಾಜಿ ಪ್ರಧಾನಿ ಲಾಲ್ ಬಹದ್ದೂರು ಶಾಸ್ತ್ರಿಯವರ ಜನ್ಮದಿನಾಚರಣೆ ಅಂಗವಾಗಿ ತಾಲೂಕಿನ ಬಿಆರ್‌ಪಿ ಲಯನ್ಸ್ ಕ್ಲಬ್ ಲೇಕ್ ಸಿಟಿವತಿಯಿಂದ ಬಡ ವಿದ್ಯಾರ್ಥಿನಿಯವರು ಉನ್ನತ ಶಿಕ್ಷಣ ಪಡೆಯಲು ಆರ್ಥಿಕವಾಗಿ ನೆರವು ನೀಡಲಾಯಿತು.
ಲಯನ್ಸ್ ಕ್ಲಬ್ ಲೇಕ್ ಸಿಟಿ ಹಲವಾರು ವರ್ಷಗಳಿಂದ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಅಲ್ಲದೆ ವಿಭಿನ್ನ ರೀತಿಯ ಸೇವಾ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಗುರುತಿಸಿಕೊಂಡಿದೆ. ಪ್ರಸ್ತುತ ಕುವೆಂಪು ವಿಶ್ವ ವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾದಲ್ಲಿ ಉನ್ನತ ಶಿಕ್ಷಣ ಪಡೆಯಲು ತಲಾ 15 ಸಾವಿರ ರು. ಗಳಂತೆ ಒಟ್ಟು ನಲವತ್ತೈದು ಸಾವಿರ ರು.ಗಳನ್ನು ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಮೂವರು ವಿಧ್ಯಾರ್ಥಿನಿಯರಿಗೆ ನೀಡುವ ಮೂಲಕ ಅವರ ಉನ್ನತ ಶಿಕ್ಷಣಕ್ಕೆ ನೆರವಾಗಿದೆ. ಕ್ಲಬ್ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದ್ದು, ಕ್ಲಬ್ ಅಧ್ಯಕ್ಷ ಡಾ. ನವೀನ್ ನಾಗಾಜ್, ಪ್ರಾಂತೀಯ ಅಧ್ಯಕ್ಷ ಡಾ. ಎಂ. ಸುರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
